• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು!

Tulunadu News Posted On December 9, 2021
0


0
Shares
  • Share On Facebook
  • Tweet It

ತಮಿಳುನಾಡು ಮೂಲದ ರಾಜನ್ ಚಿನ್ನತಂಬಿ ಹಾಗೂ ಆತನ ಸ್ನೇಹಿತ ಬಿ.ಪಿ ಪ್ರಮೋದ್ ಬಂಧಿತ ಆರೋಪಿಗಳಾಗಿದ್ದಾರೆ. 22 ರಂದು ಹೆಚ್ ಪಿಸಿಎಲ್ ಪ್ಲಾಂಟ್ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜನ್ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಕುಳಾಯಿ, ಕಾನ, ಹೊಸಬೆಟ್ಟು, ಕಡಬೊಂಡಿ ಪ್ರದೇಶಗಳಲ್ಲಿ 2021 ರಲ್ಲಿ ಮನೆ ಕಳವು ಪ್ರಕರಣಗಳಲ್ಲಿ ನಾಲ್ಕು ಪ್ರಕರಣಗಳ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಮಾಹಿತಿ ಆತ ನೀಡಿದ್ದ. ಆತನನ್ನು ದಸ್ತಗಿರಿ ಮಾಡಿ ಬೆಂಗಳೂರಿನ ಚಂದಾಪುರದ ಕೀರ್ತಿ ಲೇಔಟಿನ ಬಿ. ಪಿ ಪ್ರಮೋದ್ ಎಂಬವನಿಗೆ ಸೇರಿದ ಲಕ್ಷ್ಮೀ ಕೇರಳ ಮೆಸ್‍ ನ ರೂಮಿನಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ಸ್ವಾಧೀನ ಪಡಿಸಿ ಪ್ರಮೋದ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ರಾಜನ್ ಕಳವು ಮಾಡಿ ತಂದಿರುವ ಚಿನ್ನದ ಒಡವೆಗಳ ಪೈಕಿ ಮಣಪುರಂ ಪೈನಾನ್ಸ್ ನಲ್ಲಿ ಅಡಮಾನ ಇರಿಸಿದ್ದ ಚಿನ್ನದ ಒಡವೆಗಳನ್ನು ಪೊಲೀಸರು ಸ್ವಾಧೀನ ಪಡಿಸಿದ್ದು, ಅಲ್ಲದೆ ರಾಜನ್ ನ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ತೆಲ್ಲುಗುಮ್ ಪಾಳಯಂ ಎಂಬಲ್ಲಿನ ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 16,50,000 ರೂ. ಮೌಲ್ಯದ 366.632 ಗ್ರಾಂ ಚಿನ್ನದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಐಪಿಎಸ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಪ್ಪ.ಕೆ, ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರಯ್ಯ ಹಾಗೂ ಸಿಬ್ಬಂದಿಗಳು ಇದ್ದರು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search