ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕುಕ್ಕೆಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ!
Posted On December 27, 2021

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್ ನಜೀರ್ ಅವರು ಸಲ್ಲಿಸಿದರುಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು.
ಅಂದಹಾಗೆ ಅಬ್ದುಲ್ ನಜೀರ್ ಅವರು ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ. ನಿನ್ನೆ (ಡಿ.26) ರಾತ್ರಿ 8 ಗಂಟೆ ಸುಮಾರಿಗೆ ಹೈದರಾಬಾದ್ನಿಂದ ಮಂಗಳೂರಿಗೆ ಆಗಮಿಸಿ, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಸ್ತವ್ಯ ಹೂಡಿದರು. ನಾಳೆ (ಡಿ.28) ಕುಕ್ಕೆಯಿಂದ ಪುತ್ತೂರಿಗೆ ಆಗಮಿಸಿ, ಬಾರ್ ಅಸೋಸಿಯೇಷನ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
2022ರ ಜನವರಿ 1ರವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಅಬ್ದುಲ್ ನಜೀರ್ ಅವರು ಭಾಗವಹಿಸಲಿದ್ದಾರೆ.
- Advertisement -
Trending Now
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
March 23, 2023
Leave A Reply