ಕೊರಗ ಸಮುದಾಯದ ಮೇಲೆ ದಾಳಿ-ಕೋಟ ಎಸ್ಐ ಅಮಾನತು
Posted On December 29, 2021
0

ಉಡುಪಿ: ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಅಲ್ಲದೆ ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಏನಿದು ಘಟನೆ:
ಕಳೆದ ಸೋಮವಾರ ರಾತ್ರಿ ಕೊಟ್ಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಾರೆ ಎಂಬ ಸ್ಥಳಿಯರೋಬ್ಬರ ದೂರಿನ ಅನ್ವಯ ತೆರಳಿದ್ದ ಪಿಎಸ್ ಐ ಮತ್ತವರ ತಂಡ ಅಲ್ಲಿದ್ದ ಜನರ ಮೇಲೆ ಲಾಠಿ ಬೀಸಿದ್ದು ಘಟನೆಯಲ್ಲಿ ಮದುಮಗ ಸೇರಿ ಹಲವರು ಗಾಯಗೊಂಡಿದ್ದರು. ಪೊಲೀಸರ ದೌರ್ಜನ್ಯದ ಕುರಿತು ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ತನಿಖೆಗೆ ಆದೇಶ ನೀಡಿದ್ದು ಅದರ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್ ರೈ ಅವರು ಎಸ್ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ
Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
July 18, 2025