ಮಂಗಳೂರು: ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
Posted On May 30, 2022
0
ಮಂಗಳೂರು ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ನಿನ್ನೆ ಭೇಟಿ ನೀಡಿದ್ದಾರೆ.
ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ ನೀಡಿದ ಗೃಹ ಸಚಿವರು, ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಅತೀ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಉದ್ಯಮಶೀಲತೆ ಮನೋಭಾವದ ಯುವಕರು ವ್ಯಾಪಾರ ವಹಿವಾಟುಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರು ಡೆಸ್ಟಿನ್ ಮಾಲಕರಾದ ನಂದನ್ ಶೆಣೈ, ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಬಿಜೆಪಿ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಮಂಗಲ್ಪಾಡಿ ನರೇಶ್ ಶೆಣೈ, ರಮೇಶ್ ಮಲ್ಯ, ದೇವಾನಂದ ಪೈ, ಮಾಜಿ ಉಪ ಮೇಯರ್ ರಾಜೇಂದ್ರ ಕುಮಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಶ್ರೀಕಾಂತ್ ಶೆಣೈ, ಜನಾರ್ದನ್ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.

Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









