• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಗರದ ನಡುವೆ ಕುಡ್ಲದ ಪಿಲಿಪರ್ಬದ ಮೊದಲ ಆವೃತ್ತಿಗೆ ವಿದ್ಯುಕ್ತ ತೆರೆ

Tulunadu News Posted On October 4, 2022
0


0
Shares
  • Share On Facebook
  • Tweet It

ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ, ಶಾಸಕ ಶ್ರೀ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ ಕುಡ್ಲದ ಪಿಲಿಪರ್ಬ 2022 ಭಾನುವಾರ ರಾತ್ರಿ ಅದ್ದೂರಿಯಾಗಿ ಸಮಾಪನಗೊಂಡಿತು. ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ಪ್ರಥಮ ಸ್ಥಾನದೊಂದಿಗೆ ಆಕರ್ಷಕ ಟ್ರೋಫಿಯನ್ನು ಪಡೆದು 2022 ಪಿಲಿಪರ್ಬದ ವಿಜೇತ ತಂಡವಾಗಿ ಮೂಡಿಬಂದಿದೆ.

ಪ್ರಥಮ ರನ್ನರ್ ಅಪ್ ತಂಡವಾಗಿ ಕಾಳಿಚರಣ್ ಫ್ರೆಂಡ್ಸ್ (ರಿ) ನೇಶನಲ್ ಬೋಳೂರು,

ಎರಡನೇ ರನ್ನರ್ ಅಪ್ ಆಗಿ ನಂದಿಗುಡ್ಡೆ ಫ್ರೆಂಡ್ಸ್ ಹುಲಿ, ಬಾಬುಗುಡ್ಡೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿವೆ.

ವಿಶೇಷ ಪ್ರಶಸ್ತಿಗಳನ್ನು ಕೂಡ ನೀಡಲಾಗಿದ್ದು, *ಪರ್ಬದ ಪಿಲಿ ಪ್ರಶಸ್ತಿಯನ್ನು ತುಳುವೆರ್ ಕುಡ್ಲ ಶ್ರೀರಾಮ ಕ್ರಿಕೆಟರರ್ಸ್,

*ತಾಸೆ ಕ್ಯಾಟಗರಿಯಲ್ಲಿ ಕೊಡಿಯಾಲ್ ಬೈಲ್ ಫ್ರೆಂಡ್ಸ್,

*ಮರಿಪಿಲಿ ಪ್ರಶಸ್ತಿಯನ್ನು ಮುಳಿಹಿತ್ಲು ಫ್ರೆಂಡ್ಸ್,

*ಕಪ್ಪು ಪಿಲಿ ಪ್ರಶಸ್ತಿಯನ್ನು ಕೋಡಿಕಲ್ ವಿಶಾಲ್ ಟೈಗರ್ಸ್,

*ಧರಣಿ ಮಂಡಲ ಪ್ರಶಸ್ತಿಯನ್ನು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್,

*ವಿಶೇಷ ಬಣ್ಣಗಾರಿಕೆಗಾಗಿ ಕಾಳಿಚರಣ್ ಫ್ರೆಂಡ್ಸ್ (ರಿ) ನೇಶನಲ್ ಬೋಳೂರು,

*ಮುಡಿ ಪ್ರಶಸ್ತಿಯನ್ನು ನಂದಿಗುಡ್ಡೆ ಫ್ರೆಂಡ್ಸ್ ಹುಲಿ ಬಾಬುಗುಡ್ಡೆ ಪುರಸ್ಕೃತರಾಗುವ ಮೂಲಕ ವಿಶೇಷ ಬಹುಮಾನಗಳನ್ನು ಗೆದ್ದುಕೊಂಡವು.

*ವಿಶೇಷವಾಗಿ ಶಿಸ್ತಿನ ತಂಡ ಪ್ರಶಸ್ತಿಯನ್ನು ಜೈ ಶಾರದಾಂಬ, ಪೇಜಾವರ ಪೋರ್ಕೋಡಿ ತಂಡಕ್ಕೆ ನೀಡಿ ಗೌರವಿಸಲಾಯಿತು.

ತೀರ್ಪುಗಾರರಾಗಿ ಬಜಿಲಕೇರಿ ಕಮಲಾಕ್ಷ, ಕೆ.ಕೆ ಪೇಜಾವರ, ವೇಂಕಟೇಶ್ ಭಟ್, ನವೀನ್ ಕುಮಾರ್ ಉಪಸ್ಥಿತರಿದ್ದರು.

ವಿಶ್ಲೇಷಣಾಕಾರರಾಗಿ ಕದ್ರಿ ನವನೀತ್ ಶೆಟ್ಟಿ, ಮನೋಹರ್ ಪ್ರಸಾದ್ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಶಾಸಕ ವೇದವ್ಯಾಸ ಕಾಮತ್, ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ ಪಾಂಡೇಶ್ವರ ಪ್ರಶಸ್ತಿಗಳನ್ನು ವಿತರಿಸಿದರು. ಸಂಘಟಕ ಮಂಗಲ್ಪಾಡಿ ನರೇಶ್ ಶೆಣೈ, ಉದಯ್ ಪೂಜಾರಿ ಬಳ್ಳಾಲ್ ಬಾಗ್, ಲಲಿತ್ ಮೆಂಡನ್, ಚೇತನ್ ಕಾಮತ್, ನರೇಶ್ ಪ್ರಭು, ಸೂರಜ್ ಕಾಮತ್ ಕೊಂಚಾಡಿ, ಕಿರಣ್ ಶೆಣೈ, ಮನೋಹರ್ ಶೆಟ್ಟಿ, ಜಗದೀಶ್ ಕದ್ರಿ, ಶಾನು ಕೋಡಿಕೆರೆ, ವಿಜಯ ಕುಮಾರ್ ಶೆಟ್ಟಿ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು. ಮಧುರಾಜ್, ಸೌಮ್ಯ ಕೋಟ್ಯಾನ್, ಶರ್ಮಿಳಾ ಅಮೀನ್, ಅಭಿಷೇಕ್ ಶೆಟ್ಟಿ, ಮಧು ಮೈಲಂಕೋಡಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಶಾಸಕರುಗಳಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಶ್ರೀಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಸಾಯಿರಾಂ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ ವೆಲ್, ಸಿನೆಮಾ ತಾರೆಯರಾದ ದೇವದಾಸ್ ಕಾಪಿಕಾಡ್, ವಿಜಯ ಕುಮಾರ್ ಕೊಡಿಯಾಲ್ ಬೈಲ್, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ವಿನಿತ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲಸಾರ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಾಯೋಜಕರಾದ ಎಸ್ ಕೆ ಎಸ್ ಬಿಲ್ಡರ್ ಸುಜೀತ್ ಶೆಟ್ಟಿ, ಐಎಂಅವತಾರ್ ಸಂಸ್ಥೆಯ ಮಾಲೀಕರಾದ ಮುಂಬೈ ಉದ್ಯಮಿ ದೀಪಕ್ ಶೆಣೈ ವಾಶಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಹ್ಯಾಂಗ್ಯೋ ಐಸ್ ಕ್ರೀಂ ಪ್ರದೀಪ್ ಪೈ, ಕಾಮತ್ ಕೇಟರರ್ಸ್ ಸುಧಾಕರ್ ಕಾಮತ್ ಹಾಗೂ ಗಣ್ಯರು, ಉದ್ಯಮಿಗಳು, ವಿವಿಧ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search