• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!

Tulunadu News Posted On June 8, 2023
0


0
Shares
  • Share On Facebook
  • Tweet It

ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.

ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.

ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search