ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ನೇಮಕವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಶಾಸಕರು ಆಯ್ಕೆಯಾಗಿದ್ದು, ಉಳಿದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳೂರು ಅಂದರೆ ಉಳ್ಳಾಲದಿಂದ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿರುವುದರಿಂದ ಅವರು ಸಚಿವರಾಗುವುದು ಸಾಧ್ಯವಿಲ್ಲ. ಇನ್ನು ಮೊದಲ ಬಾರಿ ಗೆದ್ದಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸದ್ಯ ಸಚಿವಸ್ಥಾನ ಸಿಗುವುದು ದೂರದ ಕನಸು. ಆದ್ದರಿಂದ ಅನಿವಾರ್ಯವಾಗಿ ಬೆಂಗಳೂರಿನ ಗಾಂಧಿ ನಗರದ ಶಾಸಕರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಿಂದ ಕಾಂಗ್ರೆಸ್ಸಿನ ಯಾರೂ ಕೂಡ ಶಾಸಕರಾಗಿ ಗೆದ್ದಿಲ್ಲದೇ ಇರುವುದರಿಂದ ಉಡುಪಿಗೆ ಬೆಳಗಾವಿ ಗ್ರಾಮೀಣ ಶಾಸಕಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕವಾಗಿದ್ದಾರೆ.
Leave A Reply