• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಾಡ್ಜ್ ‌ಮೇಲೆ ದಾಳಿ, ಜುಗಾರಿ ಆಡುತ್ತಿದ್ದವರ ಬಂಧನ

Tulunadu News Posted On June 12, 2023
0


0
Shares
  • Share On Facebook
  • Tweet It

ಮುಕ್ಕ ಚೆಕ್ ಪೋಸ್ಟ್ ನಲ್ಲಿರುವ ಲಾಡ್ಜ್ ನ ರೂಮೊಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ 7 ಮಂದಿ ಹಾಗೂ ಆಡಲು ಅವಕಾಶ ಮಾಡಿಕೊಟ್ಟ ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ‌. ಇಸ್ಪೀಟ್ ಆಟವಾಡುತ್ತಿದ್ದ ಮುಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಗಳಾದ ಲಾಲ್ ಸಾಬ್ (31), ಅಮೀರ್ ಘಣಿಸಾಬ್ (31), ದಸ್ತಗಿರ್ ಸಾಬ್ (32), ಸಿದ್ದಣ್ಣ (47 ) ಮುಹಮ್ಮದ್ ರಫೀಕ್ (34), ಪರಶುರಾಮ (29), ಜಿತೇಂದ್ರ ಹೀರಾಸಿಂಗ್ (34) ಹಾಗೂ ಜೂಜು ಆಡಲು ಸ್ಥಳ ನೀಡಿದ್ದ ಲಾಡ್ಜ್ ಮ್ಯಾನೇಜರ್ ಪಡುಬಿದ್ರೆ ಪಲಿಮಾರು ನಿವಾಸಿ ಬಾಬು ಚಂದ್ರಶೇಖರ್ (62) ಸಿಬ್ಬಂದಿ ಹೆಜಮಾಡಿ ಕೊಡಿ ನಿವಾಸಿ ರಕ್ಷಿತ್ (23) ರನ್ನು ಪೊಲೀಸರು ಬಂಧಿಸಿದ್ದಾರೆ‌.

ಆರೋಪಿಗಳಿಂದ ಆಟದಲ್ಲಿ ಪಣಕ್ಕೆ ಇಟ್ಟಿದ್ದ 26,020 ರೂ. ನಗದು, 9 ಮೊಬೈಲ್ ಫೋನ್ ಗಳು, 1 ಎರ್ಟಿಗಾ ಕಾರು ಮತ್ತು ಆಡಲು ಉಪಯೋಗಿಸಿದ್ದ ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಕ್ಕ ಚೆಕ್ ಪೋಸ್ಟ್ ನಲ್ಲಿರುವ ಲಾಡ್ಜ್ ನಲ್ಲಿ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ 79, 80 ಕೆ.ಪಿ. ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search