ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮಕ್ಕೆ ಯುವಮೋರ್ಚಾ ಕಮಿಷನರ್ ಗೆ ದೂರು
ಕೊರಗಜ್ಜನ ವಿರುದ್ಧ ಅವಹೇಳನಕಾರಿ ಬರಹ ಸಹಿತ ಹಿಂದುಗಳ ಭಾವನೆಗೆ ಧಕ್ಕೆ ತರುವಂತಹ ಕೋಮು ಪ್ರಚೋದನೆ ಮಾಡುವಂತಹ ಬರಹಗಳು ಉಳ್ಳ ಪೋಸ್ಟ್ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಹರಿಯ ಬಿಡಲಾಗುತ್ತಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸಿದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ವಿರುದ್ಧ ಇದೀಗ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದು,
ಬಿಜೆಪಿ ಯುವ ಮೋರ್ಚಾ ಉತ್ತರಮಂಡಲದ ವತಿಯಿಂದ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್ ಅವರಿಗೆ ದೂರು ಸಲ್ಲಿಸಲಾಯಿತು.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿದ ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಅವರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು.
ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಬೇಕು.
ಹಾಗೂ ಇಂತಹ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಕೇಸುಗಳನ್ನು ದಾಖಲಿಸಿ ಮುಂದೆ ಇಂಥ ಕೃತ್ಯಗಳಾಗದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಯುವಮೋರ್ಚಾ ವತಿಯಿಂದ ಪ್ರತೀ ಠಾಣೆಯ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನ ಹಾನಿ ಪೋಸ್ಟ್ಗಳು ಪ್ರಕಟವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು
ಜನಪ್ರತಿನಿಧಿಗೆ ಇಂತಹ ಪ್ರಕರಣಗಳು ಸಾಮಾನ್ಯ.
ಇದನ್ನು ಹೇಗೆ ಎದುರಿಸಬೇಕು ಎಂಬುದು ತಿಳಿದಿದೆ ಎಂದು ಹೇಳಿದ್ದಾರೆ.
Leave A Reply