• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

SI ಎಂದು ನಂಬಿಸಿ ಲಾಡ್ಜ್‌ಗೆ ಕರೆದೊಯ್ದು ರೇಪ್!

Tulunadu News Posted On August 11, 2023
0


0
Shares
  • Share On Facebook
  • Tweet It

ಸಬ್‌ ಇನ್ಸ್‌ಪೆಕ್ಟರ್‌ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ.ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಗರದ ಇಂಜಿನಿಯರಿಂಗ್ ಕಾಲೇಜಿನ 19ರ ಹರೆಯದ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ಮೂಲಕ ಗೆಳೆತನ ಮಾಡಿ ಕೊಂಡ ಆರೋಪಿ ಯಮನೂರ ತನ್ನನ್ನು ವಾಮಂಜೂರು ಠಾಣೆಯ ಎಸ್ಸೈ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿನಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಹೇಳಿದ್ದಲ್ಲದೆ ಲಾಡ್ಜ್‌ಗೆ ಕರೆದೊಯ್ದು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಆಕೆಯೊಂದಿಗಿರುವ ಫೊಟೋಗಳನ್ನು ಇತರರಿಗೆ ಹಂಚಿ ಆ ಫೊಟೋಗಳನ್ನು ಅಳಿಸಿ ಹಾಕಬೇಕಿದ್ದರೆ ಹಣದ ಬೇಡಿಕೆಯನ್ನು ಮುಂದಿಟ್ಟ ಈ ಖದೀಮ. ಈದೀಗ ಈ ಕಿರಾತಕ ಬೀದಿ ನಾಟಕ ಕಲಾವಿದನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. 2023ರ ಮೇ ತಿಂಗಳಲ್ಲಿ ನಗರದ ಕದ್ರಿ ದೇವಸ್ಥಾನದಲ್ಲಿ ಭೇಟಿ ಮಾಡಿ ಬಳಿಕ ತಣ್ಣೀರುಬಾವಿಯ ಬೀಚ್‌ಗೆ ಕರೆದೊಯ್ದು ಫೋಟೊ ತೆಗೆದುಕೊಂಡು ಬಳಿಕ ಅದನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ ಬೆಂಗಳೂರು ಮತ್ತು ಕಿನ್ನಿಗೋಳಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ ಆ ಫೋಟೊಗಳನ್ನು ಆಕೆಯ ಮನೆಯವರಿಗೆ ಮತ್ತು ಸ್ನೇಹಿತರ ಮೊಬೈಲ್‌ಗೆ ಕಳುಹಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ. ಈ ಫೋಟೊಗಳನ್ನು ಅಳಿಸಿ ಹಾಕಬೇಕಿದ್ದರೆ 1.50 ಲಕ್ಷ ರೂ. ನೀಡಬೇಕು ಎಂದು ಬೇಡಿಕೆಯನ್ನಿಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯು ಮಂಗಳೂರು ಪೊಲೀಸರಿಗೆ ದೂರು ನೀಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಯಮನೂರ ಬೀದಿ ನಾಟಕ ಕಲಾವಿದನಾಗಿದ್ದರಿಂದ ಆತನು ಪೊಲೀಸ್ ಸಮವಸ್ತ್ರ ಹೊಂದಿದ್ದ. ಕೃತ್ಯಕ್ಕೆ ಇದೇ ಸಮವಸ್ತ್ರವನ್ನು ಬಳಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯ ವಿದ್ಯಾರ್ಥಿನಿಯರ, ಹೆಣ್ಮಕ್ಕಳ ಪರಿಚಯ ಮಾಡಿಕೊಂಡು ಪ್ರೀತಿಯ ನಾಟಕವಾಡಿ, ಅತ್ಯಾಚಾರ, ಮೋಸ ಮಾಡುವ ಪ್ರಕರಣಗಳು ಇದೀಗ ಹೆಚ್ಚಾಗುತ್ತಿವೆ. ಹಾಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಮೋಸದ ಜಾಲಕ್ಕೆ ಬಲಿ ಬೀಳದಂತೆ ಮಂಗಳೂರು ನಗರ ಪೊಲೀಸ್ ಅಯುಕ್ತ ಕುಲದೀಪ್ ಕುಮಾರ್ ಜೈನ್ ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search