ಲಡಾಕ್ ಪ್ರದೇಶದಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಮೋದಿಗೆ ನಾಗರಿಕರ ಅಭಿನಂದನೆ!
ಕಾಂಗ್ರೆಸ್ಸಿನ ವಯನಾಡ್ ಸಂಸದ ರಾಹುಲ್ ಗಾಂಧಿಯವರು ಲೇಹ್ ಲಡಾಕ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಬೈಕ್ ನಲ್ಲಿ ಲಾಂಗ್ ಡ್ರೈವ್ ಹೋಗುವ ಮೂಲಕ ತಮ್ಮ ಪ್ರವಾಸವನ್ನು ಆನಂದಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಲೇಹ್ ಲಡಾಕ್ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ರಚನೆಯಾದ ಬಳಿಕ ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಇದು ರಾಹುಲ್ ಅವರ ಮೊದಲ ಭೇಟಿಯಾಗಿದೆ. ಅವರಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಲೇಹ್ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಿದರು. ರಾಹುಲ್ ಅವರು ಪನಗೊಂಗ್ ಲೇಕ್ ಪ್ರದೇಶಕ್ಕೂ ಭೇಟಿ ನೀಡಿ ಅಲ್ಲಿನ ಪ್ರವಾಸಿಗೃಹದಲ್ಲಿ ರಾತ್ರಿ ಕಳೆದರು.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಬರೆದಿರುವ ರಾಹುಲ್ ತಮ್ಮ ತಂದೆ ಈ ಪ್ರದೇಶದ ಸುಂದರತೆಯ ಬಗ್ಗೆ ಸದಾ ಹೇಳುತ್ತಿದ್ದರು ಎಂದು ತಿಳಿಸಿದ್ದಾರೆ. ಎರಡು ದಿನಗಳ ಪ್ರವಾಸಕ್ಕೆ ಆಗಮಿಸಿದ ರಾಹುಲ್ ಈಗ ಅದನ್ನು ಆರು ದಿನಗಳಿಗೆ ವಿಸ್ತರಿಸಿದ್ದಾರೆ. ಕಾರ್ಗಿಲ್ ಹಿಲ್ ಕೌನ್ಸಿಲ್ ಇದರ ಚುನಾವಣೆ ಸೆಪ್ಟೆಂಬರ್ 10 ರಂದು ನಡೆಯಲಿದೆ. ಭಾರತೀಯ ಜನತಾ ಪಾರ್ಟಿ ವಿರುದ್ಧ ಕಾಂಗ್ರೆಸ್ ಮತ್ತು ನ್ಯಾಶನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ” ಲಡಾಕ್ ನಲ್ಲಿ ಅತ್ಯುತ್ತಮ ರಸ್ತೆಗಳಲ್ಲಿ ರಾಹುಲ್ ಗಾಂಧಿಯವರು ಪ್ರಯಾಣ ಮಾಡಲು ಸಾಧ್ಯವಾಗಿರುವುದಕ್ಕೆ ನರೇಂದ್ರ ಮೋದಿಯವರನ್ನು ಅಭಿನಂದಿಸಬೇಕು” ಎಂದು ಹೇಳಿದ್ದಾರೆ. ಭಯಮುಕ್ತ ಪರಿಸರದಲ್ಲಿ ಅತ್ಯುತ್ತಮ ರಸ್ತೆಮಾರ್ಗದಲ್ಲಿ ರಾಹುಲ್ ಬೈಕ್ ರೇಡ್ ಮಾಡಲು ಸಾಧ್ಯವಾಗಿರುವುದಕ್ಕೆ ಮೋದಿ ದೂರದೃಷ್ಟಿ ನೀತಿಗಳೇ ಕಾರಣ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Leave A Reply