ಚಂದ್ರಯಾನ-3 ಯಶಸ್ವಿ!
Posted On August 23, 2023
0

ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಮೇಲ್ಮೈಗೆ ಇಳಿಯುವಲ್ಲಿ ಯಶಸ್ವಿಯಾಗಿದ್ದು, ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ.
600 ಕೋಟಿ ರೂ. ವೆಚ್ಚದ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಲಾಗಿತ್ತು. 41 ದಿನಗಳ ಪ್ರಯಾಣದ ನಂತರ ಅದು ಚಂದ್ರನ ಕಕ್ಷೆ ತಲುಪಿದೆ.
ಲ್ಯಾಂಡರ್ ಒಳಗಿರುವ ರೋವರ್ ಚಂದ್ರನ ಮೇಲ್ಮೈಗೆ ಇಳಿದಿದ್ದು, ಅಲ್ಲಿನ ಸುತ್ತಮುತ್ತಲಿನ ಪ್ರದೇಶಗಳನ್ನು ಅಧ್ಯಯನ ನಡೆಸಲಿದೆ. ಚಂದ್ರನ ಒಂದು ದಿನ (ಭೂಮಿಯ 14 ದಿನಗಳು) ಕಾಲ ಇದು ಕೆಲಸ ಮಾಡಲಿದೆ. ಚಂದ್ರನ ಮೇಲ್ಮೈಯ ಸ್ಥಳದಲ್ಲಿ ರಾಸಾಯನಿಕ ವಿಶ್ಲೇಷಣೆಯನ್ನು ಇದು ಕೈಗೊಳ್ಳಲಿದೆ. ಲ್ಯಾಂಡರ್ ಮತ್ತು ರೋವರ್‌ಗಳು ಚಂದ್ರನ ಮೇಲ್ಮೈಯಲ್ಲಿ ವಿವಿಧ ಪ್ರಯೋಗಗಳನ್ನು ಕೈಗೊಳ್ಳಲು ವೈಜ್ಞಾನಿಕ ಪೇಲೋಡ್‌ಗಳನ್ನು ಹೊಂದಿವೆ.
Trending Now
ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
August 28, 2025
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
August 26, 2025