• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ

Tulunadu News Posted On September 15, 2023


  • Share On Facebook
  • Tweet It

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಮತ್ತು ಶಿವಮೊಗ್ಗದ ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ನಡೆಸಿದ್ದ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾಗಿದ್ದ ಶಿವಮೊಗ್ಗ ಮೂಲದ ಅರಾಫತ್‌ ಆಲಿಯನ್ನು ಎನ್‌ಐಎ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ್ದಾರೆ.

ಕೀನ್ಯಾ ದೇಶದ ನೈರೋಬಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಕಾಲಿಡುತ್ತಿದ್ದಾಗಲೇ ಎನ್‌ಐಎ ಅಧಿಕಾರಿಗಳು ಬಲೆ ಬೀಸಿದ್ದು, ಅರೆಸ್ಟ್ ಮಾಡಿದ್ದಾರೆ. 2020ರ ಆಗಸ್ಟ್ ತಿಂಗಳಲ್ಲಿ ಲಷ್ಕರ್ ಪರವಾಗಿ ಗೋಡೆ ಬರಹ ಬರೆದಿದ್ದ ಪ್ರಕರಣದಲ್ಲಿ ಮೊದಲ ಬಾರಿಗೆ ಅರಾಫತ್ ಆಲಿ ಹೆಸರು ಕೇಳಿಬಂದಿತ್ತು. ಈತನ ಅಣತಿಯಂತೆ, ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರೀಕ್ ಗೋಡೆ ಬರಹವನ್ನು ಬರೆದಿದ್ದರು. ಆನಂತರ, ಇವರಿಬ್ಬರು ಅರೆಸ್ಟ್ ಆಗಿದ್ದರೂ, ಇವರ ಜೊತೆಗೆ ಸಂಪರ್ಕದಲ್ಲಿದ್ದ ಅರಾಫತ್ ಆಲಿ ವಿದೇಶದಲ್ಲಿ ಇರುವುದು ಪತ್ತೆಯಾಗಿತ್ತು.
ಆನಂತರ, 2022ರ ಸೆಪ್ಟೆಂಬರ್ ತಿಂಗಳಲ್ಲಿ ಶಿವಮೊಗ್ಗದ ತುಂಗಾ ನದಿಯ ತೀರದಲ್ಲಿ ಮತ್ತು ಬಂಟ್ವಾಳದ ನೇತ್ರಾವತಿ ನದಿ ತೀರದಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಆನಂತರ, ನವೆಂಬರ್ ತಿಂಗಳಲ್ಲಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಅನ್ನು ಆಟೋ ತರುತ್ತಿದ್ದಾಗಲೇ ಬ್ಲಾಸ್ಟ್ ಆಗಿತ್ತು, ಇವೆರಡು ಪ್ರಕರಣದಲ್ಲಿಯೂ ಆರೋಪಿಗಳು ಅರಾಫತ್ ಆಲಿಯ ಸಂಪರ್ಕದಲ್ಲಿರುವುದು ತನಿಖೆ ವೇಳೆ ಕಂಡುಬಂದಿತ್ತು. ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್, ಅರಾಫತ್ ಆಲಿಯ ನೇರ ಸಂಪರ್ಕದಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ ಅಧಿಕಾರಿಗಳು ಅರಾಫತ್ ಆಲಿ ಬಂಧನಕ್ಕಾಗಿ ಬಲೆ ಬೀಸಿದ್ದರು. ಇಂಟರ್ ಪೋಲ್ ನೋಟೀಸನ್ನೂ ಹೊರಡಿಸಿದ್ದರು.

ಅರಾಫತ್ ಆಲಿ ವಿದೇಶದಲ್ಲಿದ್ದುಕೊಂಡೇ ಕರ್ನಾಟಕದಲ್ಲಿ ಐಸಿಸ್ ನೆಟ್ವರ್ಕ್ ಬೆಳೆಸುವುದು, ದೇಶ ವಿರೋಧಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಚೋದಿಸಿ ಐಸಿಸ್‌ ನೆಟ್ವರ್ಕ್ ಸೇರ್ಪಡೆಗೊಳಿಸುವ ಕೆಲಸದಲ್ಲಿಯೂ ತೊಡಗಿಸಿದ್ದ. ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿದ ಬಳಿಕ ನಿಗದಿತ ಸಂಚಿನಂತೆ, ಮೈಸೂರಿನಲ್ಲಿ ಐಇಡಿ ಬಾಂಬ್ ತಯಾರಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಸ್ಫೋಟಿಸಲು ರೆಡಿ ಮಾಡಿಕೊಂಡಿದ್ದರು. 2022ರ ನವೆಂಬರ್ ತಿಂಗಳಲ್ಲಿ ಮೊಹಮ್ಮದ್ ಶಾರೀಕ್ ಕುಕ್ಕರ್ ನಲ್ಲಿ ಅಡಗಿಸಿದ್ದ ಬಾಂಬನ್ನು ಆಟೋದಲ್ಲಿ ತರುತ್ತಿದ್ದಾಗಲೇ ಮಂಗಳೂರಿನ ನಾಗುರಿಯಲ್ಲಿ ಬ್ಲಾಸ್ಟ್ ಆಗಿತ್ತು.

ಮಂಗಳೂರಿನ ಲಷ್ಕರ್ ಪರ ಗೋಡೆ ಬರಹವನ್ನು ಆರೆಸ್ಸೆಸ್ ಗುರಿಯಾಗಿಸಿ ಬರೆದಿದ್ದರು. ಸಂಘಿ ಮತ್ತು ಮನುವಾದಿಗಳೇ, ತಾಲಿಬಾನ್ ಮತ್ತು ಲಷ್ಕರ್ ಇ- ತೊಯ್ದಾ ಉಗ್ರರನ್ನು ಮಂಗಳೂರಿಗೆ ಕರೆಸುವಂತೆ ಮಾಡಬೇಡಿ, ಲಷ್ಕರ್ ಝಿಂದಾಬಾದ್ ಎಂದು ಬರೆಯಲಾಗಿತ್ತು. ಬಿಜೈನ ಅಪಾರ್ಟೆಂಟ್ ಒಂದರ ಕಂಪೌಂಡ್ ಗೋಡೆಯಲ್ಲಿ ಈ ಬರಹ ಬರೆಯಲಾಗಿತ್ತು. ಎರಡು ವಾರ ಕಾಲ ಯಾರು ಈ ಬರಹ ಬರೆದಿರುವುದು ಎಂದು ತಿಳಿಯದೆ ಕುತೂಹಲಕ್ಕೆ ಕಾರಣವಾಗಿತ್ತು. ಆನಂತರ, ವಿವಿಧ ಕಡೆಯ ಸಿಸಿಟಿವಿಗಳನ್ನು ಆಧರಿಸಿ ಪೊಲೀಸರು ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರೀಕ್ ಅವರನ್ನು ಬಂಧಿಸಿದ್ದರು. ಅರಾಫತ್ ಆಲಿ ಪ್ರೇರಣೆಯಂತೆ ಈ ಬರಹ ಬರೆದಿರುವುದೆಂದು ತನಿಖೆಯಲ್ಲಿ ಪತ್ತೆಯಾಗಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search