• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು – ಗೋವಾ ವಂದೇ ಭಾರತ್ ರೈಲು ಸೇವೆ

Hanumantha Kamath Posted On September 22, 2023
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ರೈಲನ್ನು ತಕ್ಷಣ ಆರಂಭಿಸುವಂತೆ ಮನವಿ ಸಲ್ಲಿಸಿದರು.

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ರೈಲ್ವೆ ಸಚಿವರು ನೀಡಿದ್ದಾರೆ.

ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಮಾನ್ಯ ಸಚಿವರನ್ನು ನಳಿನ್ ಅವರು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.

ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆಯನ್ನು ಸಚಿವರು ನೀಡಿದರು.

ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ನಿವಾರಣೆಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Hanumantha Kamath June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Hanumantha Kamath June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search