• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿಯಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಕಟೌಟ್ ತೆರವು!

Tulunadu News Posted On October 5, 2023
0


0
Shares
  • Share On Facebook
  • Tweet It

ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಔರಂಗಜೇಬ್ ಕಟೌಟ್, ಟಿಪ್ಪುವಿನ ಪತಾಕೆ ಸಹಿತ ಫ್ಲೆಕ್ಸ್, ಬ್ಯಾನರ್ ಗಳೇ ಕಾರಣ ಎನ್ನುವ ಅಭಿಪ್ರಾಯ ಬಂದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಮತೀಯ ಭಾವನೆಗಳಿಗೆ ದಕ್ಕೆ ತರುವ ಬ್ಯಾನರ್ಸ್, ಬಂಟಿಂಗ್ಸ್, ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಈ ಸೂಚನೆಯಂತೆ ಅಕ್ಟೋಬರ್ 10 ರಂದು ಹಿಂದೂ ಸಮಾಜೋತ್ಸವ ನಡೆಯಲಿರುವ ಉಡುಪಿಯ ಎಂಜಿಎಂ ಮೈದಾನ ಮತ್ತು ಸುತ್ತಮುತ್ತ ಅನಧಿಕೃತ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಎಸ್ ಪಿ ಡಾ. ಅರುಣ್ ಕೆ ಅವರು ಆದೇಶಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ಭಾರತೀಯ ಜನತಾ ಪಾರ್ಟಿ ಮತ್ತು ಸಂಘ ಪರಿವಾರದ ಮುಖಂಡರು ನಗರದಲ್ಲಿ 30 ಕ್ಕೂ ಹೆಚ್ಚಿನ ಕಟೌಟ್ ಗಳನ್ನು ಅಳವಡಿಸಿದ್ದು, ಯಾವುದೇ ಮುನ್ಸೂಚನೆ ನೀಡದೆ ಉಡುಪಿ ನಗರಸಭೆ ಕಟೌಟ್ ಗಳನ್ನು ತೆರವು ಮಾಡಿದೆ. ಇದು ಆಯೋಜಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ ಮುಖಂಡರು, ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿದ ಯಶಪಾಲ್ ಸುವರ್ಣ ” ಸಿದ್ಧರಾಮಯ್ಯ ಸರಕಾರ ನಡೆಸಿರುವ ಹುನ್ನಾರ ಇದು. ಇಬ್ಬಗೆ ನೀತಿಯನ್ನು ಸರಕಾರ ಪ್ರದರ್ಶಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ” ಶಿವಮೊಗ್ಗ ಘಟನೆ ನಂತರ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರಕಾರದಿಂದ ಮೌಖಿಕ ಸೂಚನೆ ಬಂದಿದೆ. ನಗರಸಭೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳು ಆದೇಶವನ್ನು ಪಾಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search