ಅನಂತಪುರ ದೇವಸ್ಥಾನದಲ್ಲಿ ದೇವರ ಮೊಸಳೆ ಮತ್ತೆ ದರ್ಶನ !
Posted On November 11, 2023

ಕಾಸರಗೋಡು: ಇತಿಹಾಸ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ಇನ್ನೊಂದು ಬಬಿಯಾ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು.
ಅದಕ್ಕಾಗಿ ದೇವರಲ್ಲಿ ಭಕ್ತರು ನಿರಂತರ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಭಕ್ತಾದಿಗಳ ಆಸೆಯಂತೆ ಅನಂತಪುರ ಕ್ಷೇತ್ರದಲ್ಲಿ ಮತ್ತೊಂದು ಮೊಸಳೆ ಕಾಣ ಸಿಕ್ಕಿದೆ. ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ.
- Advertisement -
Leave A Reply