ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ
Posted On November 18, 2023
0
ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ
ಕರ್ನಾಟಕದ ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಪದ್ಮನಾಭನಗರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅಶೋಕ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಇದೇ ಸಮುದಾಯದ ಯಾರಾದರೂ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಅನಿವಾರ್ಯತೆ ಇತ್ತು. ಯಾಕೆಂದರೆ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಅಳೆದು ತೂಗಿ ಅರು ತಿಂಗಳ ಬಳಿಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ. ವಿಜಯೇಂದ್ರ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಮತ್ತೊಂದು ಪ್ರಬಲ ಒಕ್ಕಲಿಗ ಸಮುದಾಯದ ಶಾಸಕ ವಿಪಕ್ಷ ನಾಯಕನಾಗಿ ಆಯ್ಕೆಯಾಗಬೇಕಿತ್ತು. ರೇಸಿನಲ್ಲಿ ಅಶೋಕ್, ಅಶ್ವಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಬೆಲ್ಲದ ಹೀಗೆ ಹಲವು ನಾಯಕರು ಇದ್ದರು. ಅಂತಿಮವಾಗಿ ಆರ್ ಅಶೋಕ್ ಅವರಿಗೆ ಈ ಅವಕಾಶ ಸಿಕ್ಕಿದೆ.
ಇದಕ್ಕೆ ಮುಖ್ಯ ಕಾರಣ ಅವರು ಜಾತ್ಯಾತೀತ ಜನತಾದಳದೊಂದಿಗೆ ಹೊಂದಿಕೊಂಡು ಹೋಗಬಹುದು ಎನ್ನುವ ವಿಶ್ವಾಸ ಒಂದು ಕಡೆಯಾದರೆ ಇನ್ನೊಂದು ಕಡೆ ಅವರ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಆಪ್ತರು ಎನ್ನುವುದು ಅವರ ಪ್ಲಸ್ ಪಾಯಿಂಟ್ ಕೂಡ ಆಗಿದೆ. ಇನ್ನು ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಒಕ್ಕಲಿಗರ ವಿಶ್ವಾಸವನ್ನು ಎಚ್ ಡಿ ಕುಮಾರಸ್ವಾಮಿ ಗಳಿಸಿಕೊಂಡರೆ, ನಗರ ಪ್ರದೇಶದ ಒಕ್ಕಲಿಗರ ಭರವಸೆಯನ್ನು ಅಶೋಕ್ ಗಳಿಸಿಕೊಳ್ಳುವ ವಿಶ್ವಾಸ ರಾಷ್ಟ್ರೀಯ ಬಿಜೆಪಿ ನಾಯಕರುಗಳಿಗೆ ಇದೆ. ಆದ್ದರಿಂದ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸಲಾಗಿದೆ. ಏನೇ ಆಗಲಿ, ಸದ್ಯ ಬಿಜೆಪಿಯೊಳಗಿರುವ ಬಣಗಳು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ಸ್ಥಾನಕ್ಕೆ ಆಯ್ಕೆಗೊಂಡಿರುವ ಇಬ್ಬರು ನಾಯಕರ ಬಗ್ಗೆ ಹೇಗೆ ನಡೆದುಕೊಳ್ಳುತ್ತವೆ ಎನ್ನುವುದೇ ಸದ್ಯ ಕುತೂಹಲ!
Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
December 23, 2025









