ಶಬರಿಮಲೆ ಯಾತ್ರಿಕರ ಬಸ್ ಪಲ್ಟಿ
Posted On November 22, 2023
0
ಕಾಸರಗೋಡು : ಆಂಧ್ರಪ್ರದೇಶದ ಅಯ್ಯಪ್ಪ ಮಾಲಾಧಾರಿಗಳನ್ನು ಒಳಗೊಂಡ ಖಾಸಗಿ ಬಸ್ ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದಂತಹ ಸಂದರ್ಭದಲ್ಲಿ, ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ ಲಾಹ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಲಾಹ ಎಂಬಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಮಗುಚಿ ಬಿದ್ದಿದೆ.
ಮಾಹಿತಿಗಳ ಪ್ರಕಾರ 7 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಗಾಯಗೊಂಡಿದ್ದಂತಹ ಪ್ರಯಾಣಿಕರನ್ನು ಪತ್ತನಂತಿಟ್ಟ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
January 12, 2026









