ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
Posted On November 28, 2023
ಅನ್ಯಕೋಮಿನ ಯುವಕ, ಯುವತಿ ಮಂಗಳೂರಿನ ಮಂಕಿಸ್ಟ್ಯಾಂಡ್ ಬಳಿ ಮಳಿಗೆಯೊಂದರಲ್ಲಿ ಉದ್ಯೋಗದಲ್ಲಿತ್ತು. ಯುವತಿ ಚಿಕ್ಕಮಗಳೂರಿನ ಮೂಲದವಳಾಗಿದ್ದು, ಅನ್ಯ ಕೋಮಿನ ಯುವಕನೊಂದಿಗೆ ಸ್ಕೂಟರ್ ನಲ್ಲಿ ಸುತ್ತಾಡುತ್ತಿದ್ದಳು. ಇದನ್ನು ಇತ್ತೀಚೆಗೆ ಗಮನಿಸಿದ ಬಜರಂಗದಳದ ಕಾರ್ಯಕರ್ತರು ಸೋಮವಾರ ಬೈಕಿನಲ್ಲಿ ಫಾಲೋ ಮಾಡಿ ಮಂಕಿಸ್ಟ್ಯಾಂಡ್ ಬಳಿ ಅಡ್ಡಹಾಕಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆಗ ಎರಡೂ ಕೋಮಿನ ಯುವಕರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪದಕ್ಕೆ ತೆರಳುತ್ತಿದ್ದಂತೆ ಪಾಂಡೇಶ್ವರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಗುಂಪು ಚದುರಿಸಿ ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ಪಾಂಡೇಶ್ವರ ಪೊಲೀಸರು ತನಿಖೆ ನಡೆಸಿದ್ದಾರೆ.
- Advertisement -
Trending Now
ನಳಿನ್ ಎಂಬ ಸ್ಥಿತಪ್ರಜ್ಞ ಪ್ರಚಾರಕನಿಂದ ಪ್ರಸ್ತುತದ ತನಕ ಹೇಗೆ ಸಾಧ್ಯ?
October 2, 2024
ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧದ ಕುರಿತು ಜಾಗೃತಿ -ಅನುಪಮ್ ಅಗರ್ವಾಲ್
September 27, 2024
Leave A Reply