#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!

ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದಾಗ ಕ್ಲಿಕ್ಕಿಸಿದ ಫೋಟೋಗಳನ್ನು ಮೆಲೋನಿ ತಮ್ಮ ಎಕ್ಸ್ ಹಾಗೂ ಇನ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದು ಸಾಮಾಜಿಕ ಮಾಧ್ಯಮಗಳ ವೇದಿಕೆಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಅಷ್ಟೇ ಅಲ್ಲ, ಪ್ರಸ್ತುತ ಟಾಪ್ ಟ್ರೆಂಡಿನಲ್ಲಿದೆ.
ದುಬೈನಲ್ಲಿ ಇತ್ತೀಚೆಗೆ ನಡೆದ ಕಾನ್ಪರೆನ್ಸ್ ಆಫ್ ಪಾರ್ಟಿಸ್ (ಸಿಒಪಿ) ನ 28 ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸಹ ಭಾಗವಹಿಸಿದ್ದರು. ಆಗ ಮೋದಿ ಅವರ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದ ಮೆಲೋನಿ ಅವರು ತಮ್ಮ ಇನ್ಟಾಗ್ರಾಂ ಹಾಗೂ ಏಕ್ಸ್ ಪ್ರೋಫೈಲ್ ಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ #ಮೆಲೋಡಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ “ಸಿಒಪಿ 28 ನಲ್ಲಿ ಉತ್ತಮ ಸ್ನೇಹಿತರು” ಎಂದು ಪೋಸ್ಟಲ್ಲಿ ಬರೆದುಕೊಂಡಿದ್ದಾರೆ. ಇದು ಅತೀ ಕಡಿಮೆ ಅವಧಿಯಲ್ಲಿ ಟಾಪ್ ಟ್ರೆಂಡ್ ಆಗಿದೆ.
ಈ ಹಿಂದೆ ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಮೆಲೋನಿ ನಡುವಿನ ಒಡನಾಟ ಗಮನ ಸೆಳೆದಿತ್ತು. ಮೆಲೋನಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಸಹ ತಿಳಿಸಿದ್ದರು.
Leave A Reply