ಮೂಡಾ ಆಯುಕ್ತ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಮನ್ಸೂರ್ ಆಲಿ ವಿರುದ್ಧ ಲೈಂಗಿಕ ಕಿರುಕುಳ, ಮಾನಭಂಗ ಯತ್ನ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ರ ( ಮಹಿಳೆಯ ಮೇಲೆ ಹಲ್ಲೆ ಮತ್ತು ಮಾನಭಂಗ ಯತ್ನ) ಹಾಗೂ 35 ಎ ( ಲೈಂಗಿಕ ಕಿರುಕುಳ) ಅಡಿ ಉರ್ವಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಆಲಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪೊಲೀಸ್ ಕಮೀಷನರ್ ಅನುಪಮ್ ಅರ್ಗವಾಲ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು ಉರ್ವಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಹಿಳೆಗೆ ಲೈಂಗಿಕ ಕಿರುಕುಳ, ದೈಹಿಕ ಕಿರುಕುಳ ನೀಡಿರುವ ಘಟನೆಯನ್ನು ದುರ್ಗಾವಾಹಿನಿ ಹಾಗೂ ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಹುದ್ದೆಯಿಂದ ಆರೋಪಿಯನ್ನು ವಜಾಗೊಳಿಸಬೇಕು ಮತ್ತು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮೂಡಾ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹಿಸಿದ್ದಾರೆ. ಅದೇ ರೀತಿಯಾಗಿ ತಕ್ಷಣ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಮೂಡಾದ ಆಯುಕ್ತ ಮನ್ಸೂರ್ ಅಲಿಯನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ.
Leave A Reply