ಗುಜರಾತ್ ಚುನಾವಣೆ ಜವಾಬ್ದಾರಿ ಜೇಟ್ಲಿಗೆ?
Posted On September 1, 2017
ದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ವರ್ಷಾಂತ್ಯದಲ್ ನಡೆಯಲಿರುವ ಗುಜರಾತ ವಿಧಾನಸಭೆ ಚುನಾವಣೆಯ ಜವಬ್ದಾರಿ ನೀಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಗಾಗಿ ಜೇಟ್ಲಿ ವಿತ್ತ ಖಾತೆಗೆ ರಾಜಿನಾಮೆ ಸಲ್ಲಿಸಿ ಗುಜರಾತ್ ಚುನಾವಣೆಯ ಜವಾಬ್ದಾರಿಯನ್ನು ಹೊರಲಿದ್ದಾರೆ ಎನ್ನಲಾಗುತ್ತಿದೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಆರಂಭವಾಗಿದ್ದು, 13 ಸಚಿವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಬದಲಿಗೆ ಕರ್ನಾಟಕದಿಂದ ಹೊಸ ಮುಖದ ವ್ಯಕ್ತಿಿಯೊಬ್ಬರಿಗೆ ಸಚಿವ ಸ್ಥಾನ ನೀಡಲು ಚಿಂತನೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
- Advertisement -
Trending Now
ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!
January 14, 2025
Leave A Reply