ಅಯೋಧ್ಯೆಯಲ್ಲಿ ರಾಮನವಮಿಯಂದು ಬಾಲರಾಮನ ಹಣೆಗೆ ಸೂರ್ಯತಿಲಕ!
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮ ನವಮಿಗೆ ಅಯೋಧ್ಯೆಯ ರಾಮ ಮಂದಿರದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಂದು ಗರ್ಭಗುಡಿಯಲ್ಲಿ ಒಂದು ಪವಾಡ ನಡೆಯಲಿದೆ. ಬಾಲರಾಮನ ಹಣೆಗೆ ಸೂರ್ಯನ ಕಿರಣ ಚುಂಬಿಸುವ ಗಳಿಗೆಗೆ ಎಲ್ಲರೂ ಕಾಯುತ್ತಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟುವಾಗಲೇ ಬಾಲರಾಮನ ಮೂರ್ತಿಯ ಹಣೆಗೆ ಸೂರ್ಯನ ಕಿರಣಗಳು ಮುತ್ತಿಕ್ಕುವಂತೆ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ವಾಸ್ತುತಜ್ಞರ ಸಹಾಯವನ್ನು ಪಡೆದುಕೊಳ್ಳಲಾಗಿದೆ. ಇದಕ್ಕಾಗಿ ಈ ಮೊದಲೇ ಪ್ರಯೋಗಾತ್ಮಕ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ.
ರಾಮನವಮಿಯಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯ ಮೇಲೆ ಬರುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣ ಬಾಲರಾಮನ ಹಣೆಗೆ ಚುಂಬಿಸಿ ನಾಲ್ಕು ನಿಮಿಷ ಅಲ್ಲಿಯೇ ಇರಲಿದೆ. 75 ಮಿ.ಮೀ ಗಾತ್ರದ ಈ ಸೂರ್ಯ ತಿಲಕ ನಂತರ ನಿಧಾನವಾಗಿ ಸರಿಯಲಿದೆ.
ಇದರ ಹಿಂದೆ ರೂರ್ಖಿಯಲ್ಲಿರುವ ಕೇಂದ್ರಿಯ ನಿರ್ಮಾಣ ಸಂಶೋಧನಾ ಸಂಸ್ಥೆಯ ಸಂಶೋಧನಾ ವಿಭಾಗದ ಸಹಾಯ ಪಡೆಯಲಾಗಿದೆ. ತಿಲಕ್ ಆಫ್ ಸೂರ್ಯರೇಸ್ ಎಂಬ ಸಾಧನವನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಾಧನದಿಂದಲೇ ಬಾಲರಾಮನ ಮೂರ್ತಿಯ ಮೇಲೆ ಸೂರ್ಯ ತಿಲಕ ಮೂಡುವಂತೆ ವಿನ್ಯಾಸಗೊಳಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
Leave A Reply