• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗ್ರೆ ಪರಿಸರದ ನಾಗರಿಕರಿಗೆ ಶೀಘ್ರ ಶುಭ ಸುದ್ದಿ – ಶಾಸಕ ಕಾಮತ್

Tulunadu News Posted On August 16, 2024


  • Share On Facebook
  • Tweet It

ಮಂಗಳೂರಿನ ಬೆಂಗ್ರೆ ಪರಿಸರದ ಸುಮಾರು 600 ಕುಟುಂಬಗಳಿಗೆ 1994 ನೇ ಇಸವಿಯಲ್ಲಿ ಕೊಡಲಾಗಿದ್ದ ಹಕ್ಕುಪತ್ರಗಳಲ್ಲಿ ಚೆಕ್ ಬಂದಿ ಹಾಗೂ ಸರ್ವೇ ನಂಬರ್ ಇಲ್ಲದಂತಹ ಮನೆಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ 2023 ರ ಜನವರಿ-ಫೆಬ್ರವರಿ ವೇಳೆ ನನ್ನ ನೇತೃತ್ವದಲ್ಲಿ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದ್ದು ನಂತರದ ದಿನಗಳಲ್ಲಿ ಸ್ಥಗಿತಗೊಂಡಿದ್ದ ಮುಂದಿನ ಪ್ರಕ್ರಿಯೆಗಳು ಈಗ ಮತ್ತೆ ಚಾಲನೆಗೊಂಡಿವೆ ಮತ್ತು ಶೀಘ್ರದಲ್ಲಿ ಎಲ್ಲರಿಗೂ ಸಿಹಿ ಸುದ್ದಿ ಲಭಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು.

ಕಳೆದ ವರ್ಷ ಹಕ್ಕುಪತ್ರಗಳನ್ನು ಪಡೆದುಕೊಂಡಿದ್ದ 600 ಕುಟುಂಬಗಳು ನಿರಪೇಕ್ಷಣಾ ಪತ್ರಕ್ಕಾಗಿ (ಎನ್ ಒ ಸಿ) ಮಂಗಳೂರಿನ ಕಂದಾಯ ಇಲಾಖೆಗೆ ಅರ್ಜಿಯನ್ನು ಸಲ್ಲಿಸಿದ ಸಂದರ್ಭದಲ್ಲಿ ಚುನಾವಣೆಗಳು ಎದುರಾಗಿ ಎಲ್ಲಾ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. 600 ಮನೆಗಳಿಗೆ ಹಕ್ಕು ಪತ್ರ ಕೊಟ್ಟ ನಂತರ ನಿರಪೇಕ್ಷಣಾ ಪತ್ರ (ಎನ್ ಒ ಸಿ) ಕೊಡದೇ ವಿಳಂಬ ನೀತಿ ಅನುಸರಿಸುವುದು ಯಾವುದೇ ಕಾರಣಕ್ಕೂ ಸಮ್ಮತವಲ್ಲ. ಹಾಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರಿಗೆ ಆಗಮಿಸಿದ್ದಾಗ ಈ ವಿಚಾರವನ್ನು ಗಮನಕ್ಕೆ ತಂದಿದ್ದಲ್ಲದೇ, ಎರಡೆರಡು ಬಾರಿ ಅಧಿವೇಶನದಲ್ಲೂ ಪ್ರಸ್ತಾಪಿಸಿ ಕಂದಾಯ ಸಚಿವರ ಗಮನಕ್ಕೂ ತರಲಾಗಿತ್ತು. ಜೊತೆಗೆ ಕಂದಾಯ ಇಲಾಖೆಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳ ಜೊತೆಯಲ್ಲೂ ಚರ್ಚೆ ನಡೆಸಲಾಗಿದ್ದು ಇದೀಗ ನಿರಂತರ ಪ್ರಯತ್ನದ ಫಲವಾಗಿ ಶೀಘ್ರದಲ್ಲೇ ನಿರಪೇಕ್ಷಣಾ ಪತ್ರ ಲಭಿಸಲಿದೆ. ಕೂಡಲೇ ಗ್ರಾಮ ಲೆಕ್ಕಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಿ ನಿರಪೇಕ್ಷಣಾ ಪತ್ರವನ್ನು (ಎನ್ ಒ ಸಿ) ಪಡೆದುಕೊಂಡು ಅದನ್ನು ಮಂಗಳೂರು ಮಹಾನಗರ ಪಾಲಿಕೆಗೆ ಸಲ್ಲಿಸಿ ಖಾತಾವನ್ನು ಪಡೆದುಕೊಳ್ಳುವಂತೆ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದರು.

ಇನ್ನು ಈ ಪರಿಸರದ ಉಳಿದ ಸುಮಾರು 200ಕ್ಕೂ ಅಧಿಕ ಕುಟುಂಬಗಳು 1994ನೇ ಇಸವಿಯಲ್ಲಿ ಹಕ್ಕು ಪತ್ರವನ್ನು ಪಡೆದುಕೊಳ್ಳುವಾಗ ಸರ್ಕಾರಕ್ಕೆ ಹಣ ಪಾವತಿ ಮಾಡಿದ ಬಗ್ಗೆ ದಾಖಲೆಗಳು ಲಭ್ಯವಿಲ್ಲದೇ ತಾಂತ್ರಿಕ ದೋಷವುಂಟಾಗಿತ್ತು. ಹಾಗಾಗಿ ಅವರೆಲ್ಲರೂ ಮತ್ತೆ ಸರ್ಕಾರಕ್ಕೆ ಹಣವನ್ನು ಪಾವತಿಸಬೇಕಾಗಿ ನೂತನ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ನನ್ನ ಆಕ್ಷೇಪವಿದ್ದು, 94ನೇ ಇಸವಿಯಲ್ಲೇ ಅವರೆಲ್ಲರೂ ಹಕ್ಕುಪತ್ರ ಪಡೆದುಕೊಂಡಿದ್ದಾರೆ ಎಂದರೆ ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಿದ್ದಾರೆ ಎಂದರ್ಥ. ಈಗ ಸರ್ಕಾರ ಕೊಡುತ್ತಿರುವುದು ಹೊಸ ಹಕ್ಕುಪತ್ರವಲ್ಲ. ಹಾಗಾಗಿ ಈ ಹಿಂದಿನ ಹಕ್ಕು ಪತ್ರ ಪಡೆಯಲು ಮತ್ತೆ ಸಾವಿರಾರು ರೂಪಾಯಿಗಳನ್ನು ಪಾವತಿಸಬೇಕು ಎಂಬುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಕಂದಾಯ ಸಚಿವರ ಸಹಿತ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಹಾಗಾಗಿ ಅವರಿಗೂ ಸಹ ಮುಂದಿನ ಕೆಲವೇ ದಿನಗಳಲ್ಲಿ ಹಕ್ಕುಪತ್ರ ಸಿಗಲಿದ್ದು ಸುಮಾರು 40 ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಪರಿತಪಿಸುತ್ತಿರುವ ಬೆಂಗ್ರೆ ಪರಿಸರದ ಜನತೆಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

ನಾಲ್ಕು ದಶಕಗಳಿಂದ ಹಕ್ಕುಪತ್ರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಿಯೂ ಶೂನ್ಯ ಫಲಿತಾಂಶದಿಂದ ಹತಾಶರಾಗಿದ್ದ ನಮಗೆ ಈ ಮೂಲಕ ಮತ್ತೊಮ್ಮೆ ಭರವಸೆ ಮೂಡಿದ್ದು ಇದಕ್ಕೆ ಕಾರಣೀಭೂತರಾದ ಶಾಸಕ ವೇದವ್ಯಾಸ ಕಾಮತರಿಗೆ ನಾವೆಂದೂ ಚಿರಋಣಿ ಎಂದು ಬೆಂಗ್ರೆ ಪರಿಸರ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search