• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ್ರೋಹಿ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ.

Tulunadu News Posted On August 30, 2024
0


0
Shares
  • Share On Facebook
  • Tweet It

ದೇಶದ್ರೋಹಿ ಹೇಳಿಕೆ ನೀಡಿ ಗೌರವಾನ್ವಿತ ರಾಜ್ಯಪಾಲರನ್ನು ಅವಹೇಳನ ಮಾಡಿದ ಕಾಂಗ್ರೆಸ್ಸಿಗರ ವಿರುದ್ಧ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳದ ವ್ಯವಸ್ಥೆಯ ಲೋಪವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ರಸ್ತೆ ತಡೆ ಸಹಿತ ಬೃಹತ್ ಪ್ರತಿಭಟನೆಯು ಪಿವಿಎಸ್ ಸರ್ಕಲ್ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತರು ರಾಜ್ಯ ಸರ್ಕಾರ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಪೋಲಿಸ್ ಇಲಾಖೆಯನ್ನು ಬಳಸಿಕೊಂಡು ಬೆದರಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಇಂತಹ ಬೆದರಿಕೆಗಳೆಲ್ಲ ಜಗ್ಗುವ ಮಾತೇ ಇಲ್ಲ. ಐವನ್ ಡಿಸೋಜರಂತಹ ದೇಶ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರನ್ನು ನ್ಯಾಯಾಲಯದ ಕಟಕಟೆಗೆ ತಂದೇ ತರುತ್ತೇವೆ. ಆಗ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯಲ್ಲಿ ಲೋಪ ಎಸಗಿದ್ದು ಸಾಬೀತಾದರೆ ಪೊಲೀಸರನ್ನು ಕಾಪಾಡಲು ಈ ಸರ್ಕಾರ ಬರುವುದಿಲ್ಲ. ಹಾಗಾಗಿ ಪೊಲೀಸರೇ, ನೀವು ನ್ಯಾಯದ ಪರವಾಗಿ ಕಾರ್ಯನಿರ್ವಹಿಸಿ. ಇಂತಹ ದುಷ್ಟ ಹಾಗೂ ಭ್ರಷ್ಟ ಸರಕಾರವನ್ನು ನಂಬಿ ನಿಮ್ಮ ಕರ್ತವ್ಯಕ್ಕೆ ಮೋಸ ಮಾಡಬೇಡಿ ಎಂದು ಎಚ್ಚರಿಸಿದರು.

ನಂತರ ರಸ್ತೆ ತಡೆ ನಡೆಸಿದ ಶಾಸಕರ, ಸಂಸದರ ಸಹಿತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಪಾಲಿಕೆ ಸದಸ್ಯರುಗಳ ಸಹಿತ ಅನೇಕ ಬಿಜೆಪಿ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search