• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

24 ವರ್ಷದ ಯುವತಿಯಿಂದ ಯೋಗಿ ಆದಿತ್ಯನಾಥ್ ಹತ್ಯಾ ಬೆದರಿಕೆ!

Tulunadu News Posted On November 4, 2024
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಬಾಬಾ ಸಿದ್ಧಿಕಿ ಎನ್ನುವ ಮಹಾರಾಷ್ಟ್ರದ ಶಾಸಕನನ್ನು ಬಿಷ್ಣೋಯಿ ಗ್ಯಾಂಗ್ ಸದಸ್ಯರು ಎಂದು ಹೇಳಲಾಗುವ ಕೆಲವು ಶಾರ್ಪ್ ಶೂಟರ್ ಗಳು ಹತ್ಯೆ ಮಾಡಿದ ವಿಷಯ ಇನ್ನೂ ಹಸಿಯಾಗಿರುವಾಗಲೇ ಅದೇ ಮಾದರಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಹಾಗೆ ಮುಖ್ಯಮಂತ್ರಿಗಳನ್ನೇ ಮುಗಿಸುವುದಾಗಿ ಹೇಳಿರುವ ವ್ಯಕ್ತಿ ಯಾರೆಂದು ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಾಗ ಗೊತ್ತಾಗಿರುವುದು ಏನೆಂದರೆ ಬೆದರಿಕೆ ನೀಡಿದ್ದು ಓರ್ವ ಯುವತಿ. ಆಕೆಯ ವಯಸ್ಸು 24. ಇನ್ನು ಆಕೆಯ ಹೆಸರು ಫಾತಿಮಾ ಖಾನ್. ಫಾತಿಮಾ ಖಾನ್ ಸಾಫ್ಟವೇರ್ ತಂತ್ರಜ್ಞಾನದಲ್ಲಿ ಪದವಿ ಹೊಂದಿದ್ದು ಥಾನೆ ಜಿಲ್ಲೆಯ ಉಲ್ಲಾಸ್ ನಗರದಲ್ಲಿ ವಾಸಿಸುತ್ತಿದ್ದಾಳೆ.

ಸದ್ಯ ಮುಂಬೈ ಪೊಲೀಸರು ಆಕೆ ಮಾನಸಿಕ ಸ್ಥಿಮಿತ ಸರಿಯಿಲ್ಲ ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದು, ಅವಳ ತಂದೆ ಟಿಂಬರ್ ಕಾರ್ಖಾನೆಯನ್ನು ಉದ್ಯೋಗಿಯಾಗಿದ್ದಾರೆ ಎನ್ನುವ ವಿಷಯವನ್ನು ಪತ್ತೆ ಹಚ್ಚಿದ್ದಾರೆ. ಮುಂಬೈ ಪೊಲೀಸರ ವಾಟ್ಸಪ್ ನಂಬರಿಗೆ ಬಂದ ಸಂದೇಶದಲ್ಲಿ ಮುಂದಿನ ಹತ್ತು ದಿನಗಳ ಒಳಗೆ ಯೋಗಿ ಆದಿತ್ಯನಾಥ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಅವರನ್ನು ಬಾಬಾ ಸಿದ್ದೀಕಿ ಹತ್ಯಾ ಶೈಲಿಯಲ್ಲಿಯೇ ಮುಗಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಆ ವಾಟ್ಸಪ್ ಸಂದೇಶ ಅಜ್ಞಾತ ಸಂಖ್ಯೆಯಿಂದ ಬಂದಿತ್ತು. ಆ ಸಂದೇಶದ ಬೆನ್ನು ಹಿಡಿದ ಮುಂಬೈ ಭಯೋತ್ಪಾದಕ ನಿಗ್ರಹ ದಳ ಮತ್ತು ಉಲ್ಲಾಸ್ ನಗರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆ ಯುವತಿಯ ಇರುವಿಕೆಯ ಜಾಡನ್ನು ಪತ್ತೆಹಚ್ಚಿದ್ದಾರೆ. ಸದ್ಯ ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಮಹಾರಾಷ್ಟ್ರದಲ್ಲಿ ಚುನಾವಣೆ ಸನ್ನಿಹಿತವಾಗಿದ್ದು, ಯೋಗಿ ಆದಿತ್ಯನಾಥ್ ಅವರು ಈ ತಿಂಗಳು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search