• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊದಲ ಮಗುವಿನ ಸಂಭ್ರಮ ಹಂಚಿಕೊಂಡ ರಾಹುಲ್ – ಅಥಿಯಾ!

Tulunadu News Posted On November 8, 2024
0


0
Shares
  • Share On Facebook
  • Tweet It

ಟೀ ಇಂಡಿಯಾ ವಿಕೆಟ್ ಕೀಪರ್ – ಬ್ಯಾಟ್ಸಮನ್ , ಮಂಗಳೂರು ಮೂಲದ ಕೆ.ಎಲ್ ರಾಹುಲ್ ನವೆಂಬರ್ 8 ರಂದು ಸಂಭ್ರಮದ ವಿಷಯವೊಂದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಚೊಚ್ಚಲ ಮಗುವಿಗೆ ಅಪ್ಪನಾಗುವ ಖುಷಿ. ಕಳೆದ ವರ್ಷ ಅದ್ದೂರಿಯಾಗಿ ಮದುವೆಯಾಗಿದ್ದ ಕ್ರೀಡಾ ತಾರೆ ರಾಹುಲ್ ಮತ್ತು ಚಿತ್ರನಟಿ ಅಥಿಯಾ ಶೆಟ್ಟಿ ಮುಂದಿನ ವರ್ಷ ಪೋಷಕರಾಗಿ ಬದುಕಿನಲ್ಲಿ ಭಡ್ತಿ ಹೊಂದಲಿದ್ದಾರೆ. ಈ ಬಗ್ಗೆ ಬರೆದಿರುವ ರಾಹುಲ್ ” ನಮ್ಮ ಸುಂದರ ಆರ್ಶೀವಾದ ಶೀಘ್ರದಲ್ಲಿ ಬರಲಿದೆ” ಎಂದಿದ್ದಾರೆ.
ರಾಹುಲ್ ಸದ್ಯ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದಾರೆ. ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಅವರ ಪ್ರದರ್ಶನ ನೀರಸವಾಗಿದ್ದರೂ ಬದುಕಿನಲ್ಲಿ ಅವರ ಹೊಸ ಆಯಾಮ ಮಾತ್ರ ಅವರ ಅಭಿಮಾನಿಗಳಲ್ಲಿ ಸಂತಸವನ್ನು ತಂದಿದೆ. ಅಥಿಯಾ ತಂದೆ ಖ್ಯಾತ ನಟ ಸುನೀಲ್ ಶೆಟ್ಟಿಯವರೂ ವಿದೇಶದಲ್ಲಿ ಶೂಟಿಂಗ್ ನಲ್ಲಿದ್ದಾರೆ. ಒಟ್ಟಿನಲ್ಲಿ 2019 ರಿಂದಲೇ ಪ್ರೀತಿ ಪ್ರೇಮದ ಬಲೆಯಲ್ಲಿದ್ದ ರಾಹುಲ್ ಹಾಗೂ ಅಥಿಯಾ ತಮ್ಮ ಪ್ರೀತಿಯನ್ನು 2019 ರ ಅಂತ್ಯದಲ್ಲಿ ಬಹಿರಂಗಪಡಿಸಿದ್ದರು. 2023 ರ ಜನವರಿ 23 ರಂದು ಕೆ.ಎಲ್ ರಾಹುಲ್ ಹಾಗೂ ಅಥಿಯಾ ವಿವಾಹ ಬಂಧನಕ್ಕೆ ಒಳಗಾಗಿದ್ದರು. ಇಬ್ಬರ ಮೂಲವೂ ದಕ್ಷಿಣ ಕನ್ನಡ ಜಿಲ್ಲೆಯಾಗಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search