• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಯಿಯಲ್ಲಿ ನವಜಾತ ಶಿಶು ಕಚ್ಚಿ ಓಡಿದ ನಾಯಿ!

Tulunadu News Posted On November 20, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಸೋನಾಮುಖಿಯಲ್ಲಿ ನಡೆದ ಘಟನೆ ನಿಜಕ್ಕೂ ಹೃದಯ ವಿದ್ರಾವಕವಾಗಿದೆ. ಭಾಜಪಾ ಮುಖಂಡ ಅಮಿತ್ ಮಾಳವೀಯ ಅವರು ಫೋಟೋ ಹಾಕಿ ನೀಡಿರುವ ಮಾಹಿತಿ ನಿಜಕ್ಕೂ ತುಂಬಾ ನೋವು ತರುವಂತದ್ದು.  “ಉತ್ತಮ ವೈದ್ಯಕೀಯ ಸೌಲಭ್ಯ ಇದೆ ಎಂದು ಎದೆಯುಬ್ಬಿಸಿ ಹೇಳಿಕೊಂಡು ಬರುತ್ತಿರುವ ಮಮತಾ ಬ್ಯಾನರ್ಜಿಯವರೇ, ನಿಮ್ಮ ರಾಜ್ಯದಲ್ಲಿ ಗರ್ಭಿಣಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ ಆಗುವ ಪರಿಸ್ಥಿತಿ ಬಂದಿದೆ. ಆಕೆಗೆ ಅಲ್ಲಿ ಯಾವುದೇ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿಗಳು ಇರದೇ ಆಕೆ ಒದ್ದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದುರಾದೃಷ್ಟವಶಾತ್ ತಾಯಿಯಿಂದ ಮಗು ಭೂಮಿಗೆ ಬರುವಾಗ ಅಲ್ಲಿ ಬೀದಿಬದಿ ನಾಯಿಯೊಂದು ಅಡ್ಡಾಡುತ್ತಿದ್ದು, ಅದು ಮಗುವನ್ನು ಬಾಯಿಯಲ್ಲಿ ಕಚ್ಚಿ ಓಡಿಹೋಗಿದೆ. ಇದು ನಿಜಕ್ಕೂ ಚಿಂತಾಜನಕವಾಗಿರುವ ಘಟನೆ” ಎಂದು ಅವರು ಬರೆದುಕೊಂಡಿದ್ದಾರೆ.

ನವೆಂಬರ್ 18 ರಂದು ಈ ಘಟನೆ ನಡೆದಿದೆ. ಆರು ತಿಂಗಳ ಅವಧಿಪೂರ್ವ ಹೆರಿಗೆ ಆಗಿದ್ದು, ಗರ್ಭಿಣಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಮೂತ್ರ ತರಲು ವೈದ್ಯರು ಸೂಚಿಸಿದಾಗ ಆಕೆ ಶೌಚಾಲಯಕ್ಕೆ ಹೋಗಿದ್ದಳು. ಆಕೆಯೊಂದಿಗೆ ಸಂಬಂಧಿಕ ಮಹಿಳೆಯೊಬ್ಬಳು ಇದ್ದಳು. ಶೌಚಾಲಯದಲ್ಲಿ ಅಚಾನಕ್ ಆಗಿ ಹೊಟ್ಟೆ ನೋವು ಜಾಸ್ತಿಯಾಗಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಆಕೆಯ ಜೊತೆಗಿದ್ದ ಮಹಿಳೆ ವೈದ್ಯರನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆಯಲು ಓಡಿದ್ದಾಳೆ. ಆದರೆ ಆಕೆಯ ಮನವಿಗೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಕೆ ಮತ್ತೊಮ್ಮೆ ಓಡಿ ಶೌಚಾಲಯಕ್ಕೆ ಬಂದಾಗ ಮಗು ಕಾಣೆಯಾಗಿತ್ತು. ಮಗು ಎಲ್ಲಿ ಎಂದು ಅತ್ತಿತ್ತ ಹುಡುಕಿದಾಗ ನಾಯಿಯೊಂದು ಬಾಯಿಯಲ್ಲಿ ಕಚ್ಚಿ ಓಡುತ್ತಿರುವುದು ಎಲ್ಲರಿಗೂ ಕಂಡುಬಂದಿದೆ. ಇನ್ನು ಅಲ್ಲಿರುವ ಜನರು ಹೇಳುವ ಪ್ರಕಾರ ಆ ನಾಯಿ ಈ ಘಟನೆ ಆದ ನಂತರವೂ ಅಲ್ಲಿಯೇ ಸುತ್ತಾಡುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search