• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲಾಪುವಿನಲ್ಲಿ ಪಾದಚಾರಿಗಳು, ವಾಹನ ಸವಾರರು ಮೈಮರೆತರೆ ಹೊಂಡಕ್ಕೆ ಗ್ಯಾರಂಟಿ !

Tulunadu News Posted On December 10, 2024
0


0
Shares
  • Share On Facebook
  • Tweet It

ಕಾರುಗಳ ಮೇಲಾಟಕ್ಕೆ ಪಾದಚಾರಿ ವೃದ್ದೆಯೊಬ್ಬರು ಬಲಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾಷ್ಟ್ರೀಯ ಹೆದ್ದಾರಿ 66 ಆಡಂಕುದ್ರು ಬಳಿ ಸೋಮವಾರ ಸಂಜೆ ನಡೆದಿದ್ದು ಕಲ್ಲಾಪು, ಆಡಂಕುದ್ರು ಪ್ರದೇಶ ಮೃತ್ಯು ಕೂಪವಾಗಿ ಮಾರ್ಪಟ್ಟಿದೆ.

ವೃದ್ದ ಮಹಿಳೆ ಸ್ಥಳದಲ್ಲೇ ಪ್ರಾಣ ಕಳಕೊಂಡರೆ, ಕಾರುಗಳು ಆಳವಾದ ಕಮರಿಗೆ ಉರುಳಿ ಬಿದ್ದಿವೆ. ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆ ಸೇವಂತಿ ಗುಡ್ಡೆ ನಿವಾಸಿ ಬೇಬಿ (65) ಮೃತ ದುರ್ದೈವಿಯಾಗಿದ್ದಾರೆ. ಅಡಂಕುದ್ರು ಶಾಲೆಯ ಮುಂದೆ ಪುಟ್ಟ ಅಂಗಡಿ ನಡೆಸುತ್ತಿದ್ದ ಬೇಬಿ ಅವರು ಅಂಗಡಿ ಕೆಲಸದ ಬಳಿಕ ದಿನವೂ ಕಂಕನಾಡಿ ಪಂಪ್ ವೆಲ್ ನ ಅಪಾರ್ಟ್ ಮೆಂಟ್ ಒಂದರಲ್ಲಿ ರಾತ್ರಿ ಪಾಳಿ ಕೆಲಸಕ್ಕೆ ತೆರಳುತ್ತಿದ್ದರು. ಸೋಮವಾರ ಸಂಜೆ ಎಂದಿನಂತೆ ಬೇಬಿ ರಾತ್ರಿ ಪಾಳಿ ಕೆಲಸಕ್ಕೆ ಹೊರಟಿದ್ದು ಅಡಂಕುದ್ರು ಬಳಿ ಬಸ್ಸು ಹತ್ತಲು ಹೆದ್ದಾರಿ ದಾಟುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಕಡೆ ವೇಗವಾಗಿ ಹೋಗುತ್ತಿದ್ದ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದೆ . ಪರಿಣಾಮ ಬೇಬಿ ಸ್ಥಳದಲ್ಲೇ ಪ್ರಾಣ ತೆತ್ತಿದ್ದಾರೆ. ಮಹಿಳೆಯ ಡಿಕ್ಕಿ ಹೊಡೆದ ಹೆದ್ದಾರಿ ಅಂಚಿನ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರ ಬೆನ್ನಲ್ಲೇ ಪೋಲೋ ಕಾರನ್ನ ಓವರ್ ಟೇಕ್ ಮಾಡುತ್ತಿದ್ದ ಮತ್ತೊಂದು ಕಾರು ಕೂಡ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೊದೆಗೆ ಬಿದ್ದಿದ್ದು ಕಾರು ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಅಡಂಕುದ್ರು, ಕಲ್ಲಾಪು ಪ್ರದೇಶಗಳು ಇದೀಗ ಮೃತ್ಯು ಕೂಪಗಳಾಗುತ್ತಿದ್ದು ಹೆದ್ದಾರಿಯ ಅವೈಜ್ಞಾನಿಕ ಕಾಮಾಗಾರಿ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈಗಾಗಲೇ ಅನೇಕ ಅಪಘಾತಗಳು ನಡೆದಿದ್ದು ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಪ್ರಮುಖವಾಗಿ ರಾಷ್ಟ್ರೀ ಹೆದ್ದಾರಿ ಕೂಡ ಇದೇ ಆಗಿದೆ. ಪ್ರತ್ಯೇಕ ಸರ್ವಿಸ್ ರಸ್ತೆ, ಟ್ರಾಫಿಕ್ ನಿಯಂತ್ರಣ ವ್ಯವಸ್ಥೆ ಇಲ್ಲಿ ಇಲ್ಲದ ಕಾರಣ ಬಸ್ ಹತ್ತಲು ರಸ್ತೆ ದಾಟುವವರು ಹೆದ್ದಾರಿಯಲ್ಲಿ ಮಿತಿ ಮೀರಿದ ವೇಗದಲ್ಲಿ ಸಾಗುವ ವಾಹನಗಳಿಗೆ ಬಲಿಯಾಗುತ್ತಿದ್ದಾರೆ. ದ್ವಿ ಚಕ್ರ ವಾಹನ ಸವಾರರು , ಆಟೋಗಳು ಏಕ ಮುಖ ಸಂಚಾರದ ರಸ್ತೆಯಲ್ಲಿ ವಿರುದ್ದ ಧಿಕ್ಕಿನಿಂದ ಸಾಗುತ್ತಿರುವುದು ಅಪಘಾತಗಳಿಗೆ ಆಹ್ವಾನ ನೀಡಿದಂತಾಗುತ್ತಿದೆ. ಈ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಪೊಲೀಸ್ ಇಲಾಖೆ ಮತ್ತು ಸ್ಥಳಿಯ ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search