• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024
0


0
Shares
  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search