• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಿಯಾಂಕ್ ಖರ್ಗೆ ರಾಜೀನಾಮೆ ಸಹಿತ ಸಿಬಿಐ ತನಿಖೆಯಾಗಬೇಕು :- ಶಾಸಕ ಕಾಮತ್ ಆಗ್ರಹ

Tulunadu News Posted On January 1, 2025


  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಸಾಲದ್ದಕ್ಕೆ ಸರ್ಕಾರದ ಕೃಪಾಕಟಾಕ್ಷ ಹೊಂದಿರುವ ಪ್ರಭಾವಿ ಕಾಂಗ್ರೆಸ್ ನಾಯಕರುಗಳ ಆಪ್ತರ ಕಿರುಕುಳ, ಬೆದರಿಕೆಗೆ ಮಣಿದು ಉಸಿರುಗಟ್ಟಿಸುವಂತಹ ವಾತಾವರಣದಲ್ಲಿ ಬದುಕಲಾಗದೇ ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ಕಿರುಕುಳಕ್ಕೆ ಹೆದರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೀದರ್ ನ ಗುತ್ತಿಗೆದಾರ ಸಚಿನ್ ಪಂಚಾಳ್ ಪ್ರಕರಣವೇ ಸಾಕ್ಷಿ.

ಗುತ್ತಿಗೆದಾರ ಸಚಿನ್ ಅವರು 7 ಪುಟಗಳ ಡೆತ್ ನೋಟ್ ಬರೆದು ಅದನ್ನು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಪ್ರಿಯಾಂಕ್ ಖರ್ಗೆ ಅವರ ಆಪ್ತ ದುಷ್ಟ ಕೂಟದ ಸದಸ್ಯರು ತನಗೆ ಮಾಡಿದ ಮಹಾ ಮೋಸ, ನೀಡಿದ ಚಿತ್ರಹಿಂಸೆ, ಅಲ್ಲದೇ ಸನಾತನ ಧರ್ಮ ರಕ್ಷಣೆಗೆ ಬದುಕು ಮೀಸಲಿಟ್ಟಿರುವ ಆಂದೋಲ ಸ್ವಾಮೀಜಿ, ಬಿಜೆಪಿ ಮುಖಂಡ ಚಂದು ಪಾಟೀಲ, ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ಹಲವು ಹಿಂದೂ ನಾಯಕರನ್ನು ಸುಪಾರಿ ಕೊಟ್ಟು ಹತ್ಯೆ ಮಾಡುವ ಸಂಚಿನ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಸಾಯುವ ಅಂತಿಮ ಕ್ಷಣದಲ್ಲಿ ಇಂತಹ ವಿಷಯದಲ್ಲಿ ಯಾವ ವ್ಯಕ್ತಿಯೂ ಸುಳ್ಳು ಹೇಳಲು ಸಾಧ್ಯವೇ? ಇದೊಂದು ಅತ್ಯಂತ ಆತಂಕಕಾರಿ ವಿಷಯವಾಗಿದ್ದು ಎಲ್ಲಾ ಆರೋಪಗಳು ಸಚಿವ ಪ್ರಿಯಾಂಕ್ ಖರ್ಗೆಯವರ ಸುತ್ತವೇ ಗಿರಕಿ ಹೊಡೆಯುತ್ತಿದ್ದು ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.

ಬಿಜೆಪಿಯವರು ಎಷ್ಟು ಬೇಕಾದರೂ ಹೋರಾಟ ಮಾಡಿಕೊಳ್ಳಲಿ ನಾನು ರಾಜೀನಾಮೆ ಕೊಡುವುದಿಲ್ಲ, ಎಂದು ಹಠ ಹಿಡಿದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ನನ್ನ ರಾಜೀನಾಮೆ ಕೇಳಿದರೆ ಎಚ್ಚರಿಕೆ ಎಂಬ ಸಂದೇಶವನ್ನು ಸಿಎಂ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ರವಾನಿಸಿದ್ದಾರೆ. ಅಲ್ಲದೇ ಈ ಪ್ರಕರಣದ ಕುರಿತಂತೆ ಸಿಐಡಿ ತನಿಖೆ ಸಾಕು, ಬೇರಾವುದೇ ತನಿಖೆಯೂ ಬೇಡ ಎಂಬಂತೆ ಈಗಲೇ ವ್ಯವಸ್ಥಿತವಾಗಿ ಎಲ್ಲಾ “ಸಿದ್ಧತೆ”ಗಳನ್ನು ತಮ್ಮದೇ ಸರ್ಕಾರಕ್ಕೆ ಒತ್ತಡ ಹಾಕುವ ಮೂಲಕ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ಸಿಲುಕಿದ್ದ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಕೂಡಲೇ ಪಡೆದುಕೊಂಡಿದ್ದ ಸಿದ್ದರಾಮಯ್ಯನವರಿಗೆ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಪಡೆದುಕೊಳ್ಳಲು ಧೈರ್ಯವಿಲ್ಲವೇ? ರಾಜೀನಾಮೆ ಬಿಡಿ, ಈ ಪ್ರಕರಣದ ವಿರುದ್ಧ ಒಂದೇ ಒಂದು ಪದ ಮಾತನಾಡಿದರೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಕೋಪಗೊಂಡು ತಮ್ಮ ಕುರ್ಚಿಗೆ ಕಂಟಕ ಬರುವ ಭಯ ಅವರನ್ನು ಕಾಡುತ್ತಿರಬಹುದು!

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕೆ.ಎಸ್ ಈಶ್ವರಪ್ಪನವರ ಪ್ರಕರಣ ಸೇರಿದಂತೆ ಸಣ್ಣಪುಟ್ಟ ವಿಷಯಕ್ಕೂ ಸಿದ್ದರಾಮಯ್ಯ ಆದಿಯಾಗಿ, ಪ್ರಿಯಾಂಕ ಖರ್ಗೆ ಸಹಿತ ಕಾಂಗ್ರೆಸ್ ನಾಯಕರು ಬೀದಿ ಬೀದಿಯಲ್ಲಿ ರಾಜೀನಾಮೆ ಕೊಡಿ ಎಂದು ಆರ್ಭಟಿಸುತ್ತಿದ್ದರು. ಈಗ ಅವರ ಸರ್ಕಾರವೇ ಆರೋಪಿ ಸ್ಥಾನದಲ್ಲಿರುವಾಗ ಎಲ್ಲರೂ ಮೌನ ವಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರು, ಅಮಾಯಕರು ಸರ್ಕಾರದ ಕಾರಣದಿಂದಲೇ ಸಾಯುತ್ತಿದ್ದರೂ ಭಂಡ ಕಾಂಗ್ರೆಸ್ ಸರಕಾರ ಮಾತ್ರ ಕಿಂಚಿತ್ತೂ ಮಾನ, ಮರ್ಯಾದೆ ಇಲ್ಲದಂತೆ ವರ್ತಿಸುತ್ತಿದೆ.

ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಅಟ್ಟಹಾಸ ಮಿತಿ ಮೀರಿದ್ದು ಅಲ್ಲಿ ಅನ್ಯಾಯದ ದರ್ಬಾರ್ ನಡೆಯುತ್ತಿದೆ ಎಂದು ನೊಂದ ಕುಟುಂಬದವರೇ ಹೇಳುತ್ತಿದ್ದಾರೆ. ಪೊಲೀಸರನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ತಮ್ಮದೇ ಆಡಳಿತ ನಡೆಸುತ್ತಿರುವ ಅವರು, ಪುಡಿ ರೌಡಿಗಳನ್ನು ಸಹ ಸಾಕಿಕೊಂಡು ಜನರಲ್ಲಿ ಒಂದು ರೀತಿಯ ಭಯಭೀತ ವಾತಾವರಣ ಸೃಷ್ಟಿಸಿದ್ದಾರೆ.ಆದರೆ ಒಬ್ಬ ಅಮಾಯಕನ ಸಾವಿನ ವಿಚಾರವನ್ನು ಬಿಜೆಪಿ ಇಷ್ಟಕ್ಕೇ ಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಪ್ರಿಯಾಂಕ ಖರ್ಗೆಯವರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು. ಒಂದು ವೇಳೆ ತನಿಖೆ ನಂತರ ಅವರದ್ದು ಯಾವುದೇ ತಪ್ಪಿಲ್ಲ ಎಂದು ಸಾಬೀತಾದರೆ ಸಚಿವ ಸ್ಥಾನ ಅಷ್ಟೇ ಅಲ್ಲ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹುದ್ದೆ ಬೇಕಾದರೂ ಪಡೆಯಲಿ. ಯಾರದ್ದೂ ಅಭ್ಯಂತರವಿಲ್ಲ.

ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಬೆನ್ನಲ್ಲೇ, ಇದೀಗ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಬೆದರಿಕೆಯಿಂದ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಅಮಾಯಕರಿಗೆ, ಪ್ರಾಮಾಣಿಕರಿಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ಅನೇಕ ಕುಟುಂಬಗಳನ್ನು ಅನಾಥವಾಗಿಸುತ್ತಿದೆ. ಆ ಎಲ್ಲಾ ಕುಟುಂಬಗಳ ಶಾಪ ಕಾಂಗ್ರೆಸ್ ಸರ್ಕಾರವನ್ನು ತಟ್ಟದೇ ಬಿಡದು, ಇದರ ಫಲ ಅನುಭವಿಸಲೇಬೇಕು.

ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಸಚಿನ್ ಪಡೆದಿದ್ದ ಗುತ್ತಿಗೆ ಕೆಲಸಗಳ ಬಾಕಿ ಉಳಿದಿರುವ ಹಣವನ್ನು ಪಾವತಿಸುವುದರ ಜೊತೆಗೆ ಆ ಕುಟುಂಬಕ್ಕೆ ಸೂಕ್ತ ಪರಿಹಾರವನ್ನೂ ಘೋಷಿಸಬೇಕು, ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ಹುದ್ದೆಯನ್ನು ನೀಡಬೇಕು, ಮತ್ತು ಈ ಅನ್ಯಾಯದ ಸಾವಿಗೆ ಕಾರಣರಾದ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಉಪಮೇಯರ್ ಭಾನುಮತಿ, ಪೂರ್ಣಿಮಾ, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search