• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆತ್ಮಹತ್ಯೆ ಗ್ಯಾರಂಟಿ – ಶಾಸಕ ವೇದವ್ಯಾಸ ಕಾಮತ್

Tulunadu News Posted On January 3, 2025
0


0
Shares
  • Share On Facebook
  • Tweet It

ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಮಿನಿ ವಿಧಾನ ಸೌಧದ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಪೋಸ್ಟರ್ ಅಭಿಯಾನದಲ್ಲಿ ಮಾತನಾಡಿದ ಅವರು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಸಚಿವರ, ಶಾಸಕರ, ಹಾಗೂ ಅವರುಗಳ ಆಪ್ತ ಸಹಾಯಕರ ಒತ್ತಡ, ಬೆದರಿಕೆಗೆ ಸರ್ಕಾರಿ ನೌಕರರು, ಗುತ್ತಿಗೆದಾರರು, ಸಾಲು ಸಾಲಾಗಿ ಪ್ರಾಣ ಕಳೆದುಕೊಳ್ಳುವಂತಾಗಿದೆ. ಇದರಿಂದ ಪ್ರಾಣ ಕಳೆದುಕೊಂಡವರ ಕುಟುಂಬ ಬೀದಿಗೆ ಬರುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯ ಆಪ್ತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಕುರ್ಚಿ ಅಲುಗಾಡುವ ಭಯದಿಂದ ಸಿದ್ದರಾಮಯ್ಯನವರು, ಹಾಗೂ ಮುಂದೆ ಮುಖ್ಯಮಂತ್ರಿ ಕುರ್ಚಿ ಕೈ ತಪ್ಪಬಹುದು ಎಂಬ ಭಯದಿಂದ ಡಿಕೆಶಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಾತನಾಡುತ್ತಿಲ್ಲ ಎಂದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ, ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣರ ಕಿರುಕುಳದಿಂದ ಬೇಸತ್ತು ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಎದುರೇ ನನಗೆ ಜೀವ ಭಯವಿದೆ ಎಂದು ಕಣ್ಣೀರಿಟ್ಟ ಸರ್ಕಾರಿ ಅಧಿಕಾರಿಯ ಪ್ರಕರಣ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ರುದ್ರೇಶ್‌ ಪ್ರಕರಣ, ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಅವರ ಪುತ್ರನ ಕಿರುಕುಳದಿಂದ ಚಿತ್ರಹಿಂಸೆ ಅನುಭವಿಸಿ ಕೊನೆಯುಸಿರೆಳೆದ ದಲಿತ ಇನ್ಸೆಕ್ಟರ್ ಪರಶುರಾಮ್ ಸೇರಿದಂತೆ ರಾಜ್ಯದ ವಿವಿಧಲ್ಲಿ ನಡೆದ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳನ್ನು ಉಲ್ಲೇಖಿಸಿ, ಅನೇಕ ಗುತ್ತಿಗೆದಾರರು ಕೊನೆಪಕ್ಷ ದಯಾಮರಣಕ್ಕೆ ಅವಕಾಶ ನೀಡಿ ಎಂದು ಗೋಗರೆಯುತ್ತಿದ್ದಾರೆ ಎಂದು ಶಾಸಕರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ನಂದನ್ ಮಲ್ಯ, ಮೋನಪ್ಪ ಭಂಡಾರಿ, ಪೂಜಾ ಪೈ, ಉಪಮೇಯರ್ ಭಾನುಮತಿ, ಸಂಜಯ್ ಪ್ರಭು, ಸೇರಿದಂತೆ ಮ.ನ.ಪಾ ಸದಸ್ಯರು, ಅನೇಕ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search