• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

“ನಾನು ಪಾಳೇಗಾರ ಅಲ್ಲ, ಕ್ಷೇತ್ರದ ಕಾವಲುಗಾರ!“ -ವೇದವ್ಯಾಸ ಕಾಮತ್ ಕಿಡಿ

Tulunadu News Posted On February 17, 2025
0


0
Shares
  • Share On Facebook
  • Tweet It

ಮಂಗಳೂರು: ”ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ? ಎಂದು ಕೇಳಿದ್ದಾರೆ. ನಾನು ಇದಕ್ಕೆ ಉತ್ತರ ಕೊಡುವುದಿಲ್ಲ, ಆದರೆ ನಾನು ಪಾಳೆಗಾರ ಅಲ್ಲ ಕ್ಷೇತ್ರದ ಕಾವಲುಗಾರ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ತಿರುಗೇಟು ನೀಡಿದ್ದಾರೆ.
“ನಾನು ಕಾವಲುಗಾರ ಎಂದು ಕ್ಷೇತ್ರದ ಜನತೆಯೇ ಉತ್ತರ ಕೊಟ್ಟಿದ್ದಾರೆ. ಅದನ್ನು ಅವರು ಮೊದಲು ಅರಗಿಸಿಕೊಳ್ಳಲಿ ಸಾಕು.
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಮಂಗಳಾದೇವಿಯಲ್ಲಿ ಉದ್ಘಾಟನೆಗೊಂಡಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಬಡ
ರೋಗಿಗಳನ್ನು ಹೊರದಬ್ಬಿ ಕೇವಲ ನಾಲ್ಕೆ ದಿನಕ್ಕೆ ಬೀಗ ಹಾಕಿ ಸ್ವಪ್ರತಿಷ್ಠೆ ಹಾಗೂ ರಾಜಕೀಯಕ್ಕಾಗಿ ಮರು ಉದ್ಘಾಟನೆ ಎಂಬ ಹೊಸ ಮತ್ತು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ಕಾಂಗ್ರೆಸ್ಸಿಗೆ ಕಿಂಚಿತ್ತಾದರೂ ಶೋಭೆ ಇದೆಯೇ?
ಸರ್ಕಾರದ ಯಾವುದೇ ಯೋಜನೆಗಳ ಉದ್ಘಾಟನೆಯ ರೂಪುರೇಷೆ ಸಿದ್ಧಪಡಿಸುವ ಕಾರ್ಯ ಶಾಸಕರದ್ದಲ್ಲ. ಅದು ಸರ್ಕಾರಿ ಅಧಿಕಾರಿಗಳ ಮಟ್ಟದಲ್ಲಿ ನಡೆಯುವಂತದ್ದು. ಹಾಗಾಗಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿಲ್ಲದಿದ್ದರೆ ಅದಕ್ಕೆ ನಾವು ಹೊಣೆಯಲ್ಲ. ಸಚಿವರ ಮಾತಿನಂತೆ ಹೋದರೆ ಇನ್ನು ಮೇಲೆ ಜಿಲ್ಲೆಯಲ್ಲಿ ಶಾಸಕರುಗಳು, ಯಾವುದೇ ಕಾರ್ಯಕ್ರಮಕ್ಕೆ ಆಗಮಿಸುವ
ಗಣ್ಯರ ಪಟ್ಟಿ ಸಿದ್ದಪಡಿಸುವ, ಅವರನ್ನು ಆಹ್ವಾನಿಸುವ ಆಮಂತ್ರಣ ಪತ್ರಿಕೆ ಅಧಿಕೃತವೋ, ಅನಧಿಕೃತವೋ ಎಂದು ಪರಿಶೀಲಿಸುವ ಹೆಚ್ಚುವರಿ ಜವಾಬ್ದಾರಿ ಹೊರ ಬೇಕಾಗುತ್ತದೆ“ ಎಂದು ಆಕ್ರೋಶ ವ್ಯಕ್ತಪಡಿಸಿದರು.
”ಪರಿಶಿಷ್ಟ ಸಮುದಾಯದ ಗೌರವಾನ್ವಿತ ಮೇಯರ್ ರವರು ಜಿಲ್ಲಾಡಳಿತ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ, ಮಾಹಿತಿ ನೀಡಿ ಉದ್ಘಾಟನೆಯನ್ನು ನಡೆಸಿದ್ದು ಕಾಂಗ್ರೆಸ್ಸಿಗರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಮರು ಉದ್ಘಾಟನೆ ಮಾಡಿ ತಮ್ಮ ನಿಜ
ಮಾನಸಿಕತೆಯನ್ನು ತೋರಿಸಿದ್ದಾರೆ. ಇದು ಇಡೀ ಪರಿಶಿಷ್ಟ ಸಮುದಾಯಕ್ಕಾದ ಅವಮಾನವಾಗಿದೆ. ಕ್ಷೇತ್ರದ ಶಾಸಕನಾಗಿ ನಾನು ಹಾಗೂ ಈ ಹಿಂದೆ ಮೇಯರ್ ಆಗಿದ್ದ ಸ್ಥಳೀಯ ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿಯವರು ಈ
ಯೋಜನೆಯು ಶುರುವಾದಾಗಿನಿಂದ ಹಿಡಿದು ಮುಗಿಯುವವರೆಗೆ ಪ್ರತಿ ಹಂತದಲ್ಲಿಯೂ ಬಹಳ ಮುತುವರ್ಜಿಯಿಂದ
ಕಾರ್ಯನಿರ್ವಹಿಸಿದ್ದೇವೆ. ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ರವರ ಸಹಕಾರವೂ ಇದರ ಹಿಂದಿದೆ. ಈಗ ಉದ್ಘಾಟನೆಗೆ ಹಾತೊರೆಯುತ್ತಿರುವ ಯಾರೂ ಕೂಡಾ ಅಂದು ಇರಲಿಲ್ಲ.
ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಅಧಿಕೃತ ಆಮಂತ್ರಣ ಪತ್ರಿಕೆಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯುಟಿ ಖಾದರ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಐವನ್ ಡಿಸೋಜ ರವರ ಹೆಸರೂ ಸಹ ಇದೆ. ಆದರೂ ಸಹ ಗುಂಡೂರಾವ್ ಬಂದಿಲ್ಲ. ಬಹುಷಃ ಇಂತಹ ಜನೋಪಯೋಗಿ ಯೋಜನೆಯಲ್ಲಿ ನಮ್ಮದು ಕಿಂಚಿತ್ತೂ ಕೊಡುಗೆ ಇಲ್ಲ, ಮತ್ತೆ ಯಾವ ಮುಖ ಇಟ್ಟುಕೊಂಡು
ಭಾಗವಹಿಸುವುದು ಎಂಬ ಮುಜುಗರ ಅವರನ್ನು ಕಾಡುತ್ತಿರಬಹುದು. ಎರಡು ಮೂರು ತಿಂಗಳಿಗೊಮ್ಮೆ ಬರುವ ಉಸ್ತುವಾರಿ ಸಚಿವರಿಗೆ ಇಲ್ಲಿನ ಯೋಜನೆಗಳ ಸ್ಥಿತಿಗತಿ ಗೊತ್ತಾಗುವುದು ಹೇಗೆ?“ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳು ರಾಜ್ಯದ ಅಲ್ಲಲ್ಲಿ ಉದ್ಘಾಟನಾ ಕಾರ್ಯಕ್ರಮಗಳನ್ನು ಮಾಡಬೇಕಿರುತ್ತದೆ. ಯಾವುದೋ ಕಾರಣಕ್ಕೆ ಕೊನೆಕ್ಷಣದಲ್ಲಿ ಅವರಿಗೆ ಬರಲು ಸಾಧ್ಯವಾಗದಿದ್ದಾಗ ಅಲ್ಲಿರುವ ಸ್ಥಳೀಯ ಜನಪ್ರತಿನಿಧಿಗಳು ಉದ್ಘಾಟನೆ ಕಾರ್ಯಕ್ರಮವನ್ನು ಮುಂದುವರಿಸಿಕೊಂಡು
ಹೋಗುವುದು ವಾಡಿಕೆ ಹೊರತು ಮುಖ್ಯಮಂತ್ರಿಗಳು ಬಂದಿಲ್ಲ ಎಂದು ಮರು ಉದ್ಘಾಟನೆ ಮಾಡಿದ ಉದಾಹರಣೆಗಳಿಲ್ಲ. ಸ್ವಾತಂತ್ರ್ಯ ದಿನೋತ್ಸವದಂದು ಮುಖ್ಯಮಂತ್ರಿಗಳಿಗೆ ಬರಲು ಸಾಧ್ಯವಾಗಲಿಲ್ಲವೆಂದು ಮತ್ತೊಮ್ಮೆ ಸ್ವಾತಂತ್ರ ದಿನ ಆಚರಿಸಿ ಧ್ವಜಾರೋಹಣ |
ನಡೆಸುವುದಿಲ್ಲ. ಕಾಂಗ್ರೆಸ್ ನಾಯಕರ ಯೋಗ್ಯತೆಗೆ ಇಂತಹ ಕನಿಷ್ಠ ಜ್ಞಾನವೂ ಇಲ್ಲವಾಯಿತಾ?“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ರಮೇಶ್ ಕಂಡೆಟ್ಟು, ಮಾಜಿಮೇಯರ್ ಪ್ರೇಮಾನಂದ ಶೆಟ್ಟಿ ರವಿಶಂಕರ್ ಮಿಜಾರ್, ಭಾನುಮತಿ, ಪೂರ್ಣಿಮಾ ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search