ಅಭಿವೃದ್ಧಿಗೆ ಸಹಕಾರ ಅಗತ್ಯ: ಮೋದಿ
Posted On September 4, 2017

ಬೀಜಿಂಗ್: ಶಾಂತಿ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಬ್ರಿಕ್ಸ್ ರಾಷ್ಟ್ರಗಳ ಪರಸ್ಪರ ಸಹಕಾರ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಚೀನಾದ ಕ್ಸಿಯಾಮೆನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮ್ಮೇಳನದಲ್ಲಿ ಸೋಮವಾರ ಮಾತನಾಡಿ, ಕಪ್ಪು ಹಣ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟಕ್ಕೆ ಸಹಕಾರ ಅಗತ್ಯ ಎಂದು ತಿಳಿಸಿದ್ದಾರೆ.
ಬಡತನ ನಿರ್ಮೂಲನೆಗೆ ಒತ್ತು ನೀಡಿದ್ದು, ಕೌ ಶಲ, ಆಹಾರ ಭದ್ರತೆ, ಲಿಂಗ ಸಮಾನತೆ, ಇಂಧನ, ಆರೋಗ್ಯ, ನೈರ್ಮಲ್ಯ, ಶಿಕ್ಷಣ ಸೇರಿ ಹಲವು ಕ್ಷೇತ್ರಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ದೇಶದ ಯುವಜನ ನಮ್ಮ ಶಕ್ತಿ. ಸೌರಶಕ್ತಿ ಬಳಕೆ, ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ಬ್ರಿಕ್ಸ್ ಪಾಲುದಾರಿಕೆ ಮತ್ತು ಹೊಸ ಆಲೋಚನೆಗಳು ಪ್ರಗತಿಯ ಸಾಧನವಾಗಲಿವೆ ಎಂಬ ವಿಶ್ವಾಸವಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
- Advertisement -
Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
May 31, 2023
Leave A Reply