• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲು ಜಾಮರ್.. ನಾಗರಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

Tulunadu News Posted On March 31, 2025
0


0
Shares
  • Share On Facebook
  • Tweet It

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂಬ ಹಲವಾರು ದೂರುಗಳು ಕೇಳಿ ಬರುತ್ತಿವೆ. ತುರ್ತು ಸಂದರ್ಭದಲ್ಲಿ ಅಂತೂ ದೂರವಾಣಿ ಸಂಪರ್ಕ ಸಾಧ್ಯವಾಗದೇ ವೈದ್ಯಕೀಯ ಸೇವೆಯಂತಹ ಅಗತ್ಯ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ಜೈಲಿನ ಜಾಮರ್‌ ಜೈಲು ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವಂತೆ ಶಾಸಕರು ಒತ್ತಾಯಿಸಿದರು.

ಇತ್ತೀಚೆಗೆ ಮೂರು ವಾರಗಳಿಂದ ಈ ಸಮಸ್ಯೆ ತೀವ್ರವಾಗಿತ್ತು. ಅಗತ್ಯ ಬಿದ್ದಾಗ ಯಾರಿಗಾದರೂ ಕರೆ ಮಾಡಲು ಮುಂದಾದರೆ ಕಾಲ್ ಹೋಗುತ್ತಿರಲಿಲ್ಲ. ಇದರಿಂದ ಜನ ರೋಸಿ ಹೋಗಿದ್ದರು. ಸುತ್ತಮುತ್ತಲಿನ ವ್ಯಾಪಾರಿಗಳ, ವಸತಿ ಪ್ರದೇಶಗಳ ನಾಗರಿಕರ ಅಹವಾಲಿಗೆ ಸ್ಪಂದಿಸಿರುವ ಶಾಸಕ ವೇದವ್ಯಾಸ ಕಾಮತ್ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲು ಜೈಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಇನ್ನು ಯಾವಾಗ ಈ ಸಮಸ್ಯೆ ಪರಿಹಾರವಾಗುತ್ತೆ ಎಂದು ಜನ ಕಾತರದಿಂದ ಕಾಯುವಂತಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search