ದ್ವಿತೀಯ ಪಿಯು ಫಲಿತಾಂಶ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ..

ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಜಿಲ್ಲೆ ಮೊದಲ ಸ್ಥಾನ (93.90) ಗಳಿಸಿದ್ದು, ದಕ್ಷಿಣ ಕನ್ನಡ (93.57) ದ್ವಿತೀಯ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ (48.45) ಕೊನೆಯ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಪಿಯು ಕಾಲೇಜಿನ ದೀಪಶ್ರೀ (600/599) ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ (600/599) ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇನ್ನು ಕಲಾ ವಿಭಾಗದಲ್ಲಿ ಬಳ್ಳಾರಿಯ ಕೊಟ್ಟೂರಿನ ಸಂಜನಾ ಬಾಯಿ (600/597) ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಾರ್ಚ್ 1 ರಿಂದ 20 ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಯಲ್ಲಿ ಒಟ್ಟು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನವೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.
Leave A Reply