ಪಾಕಿಸ್ತಾನ ಧ್ವಜಕ್ಕೆ ಅವಮಾನ, ಭಜರಂಗದಳದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಜಮ್ಮು ಕಾಶ್ಮೀರದ ಪ್ರಮುಖ ಪ್ರವಾಸಿ ಕೇಂದ್ರ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಎಪ್ರಿಲ್ 25 ರಂದು ವಿನೂತನವಾಗಿ ಪ್ರತಿಭಟಿಸಿದರು. ಪಾಕಿಸ್ತಾನದ ರಾಷ್ಟ್ರಧ್ವಜವನ್ನು ರಸ್ತೆ ಮತ್ತು ಇಕ್ಕೆಲಗಳಲ್ಲಿ ಬರೆದು ಸಾರ್ವಜನಿಕರು ಅದರ ಮೇಲೆ ಓಡಾಡಿ ತುಳಿದು ಅವಮಾನ ಮಾಡುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿದ್ದರು.
ಈ ಹಿನ್ನಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಉಗ್ರರು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನದ ಧ್ವಜವನ್ನು ಕಾಲಡಿಯಲ್ಲಿ ತುಳಿದು ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದೇವೆ ಎಂದು ಬಜರಂಗದಳದ ಕಾರ್ಯಕರ್ತರು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಆರಂಭದಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯ ಮೇಲೆ ಅಂಟಿಸಿರುವುದು ಯಾರು ಎನ್ನುವ ಪ್ರಶ್ನೆ ಉಂಟಾಗಿತ್ತು. ಯಾಕೆಂದರೆ ಇಂತಹ ಘಟನೆಗಳಿಂದ ಪರಿಸರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗುವ ಸಾಧ್ಯತೆ ಇತ್ತು. ಆದ್ದರಿಂದ ಪೊಲೀಸರು ಎಚ್ಚರಿಕೆಯ ಹೆಜ್ಜೆಗಳನ್ನು ಇಟ್ಟಿದ್ದರು. ನಂತರ ಈ ಘಟನೆಯನ್ನು ತಾವು ಮಾಡಿದ್ದಾಗಿ ಬಜರಂಗದಳದ ಕಾರ್ಯಕರ್ತರು ಸಮರ್ಥಿಸಿಕೊಂಡರು. ಕಲಬುರಗಿಯ ಜಗತ್ ವೃತ್ತ, ಸೂಪರ್ ಮಾರ್ಕೆಟ್ ಹಾಗೂ ಇನ್ನು ಕೆಲವು ಕಡೆಗಳಲ್ಲಿ ಪಾಕಿಸ್ತಾನ ಧ್ವಜವನ್ನು ನೆಲದ ಮೇಲೆ ಅಂಟಿಸಲಾಗಿತ್ತು.ಈ ಬಗ್ಗೆ ಪೊಲೀಸ್ ಕಮೀಷನರ್ ಎಸ್ ಡಿ ಶರಣಪ್ಪ ಅವರು ಮಾತನಾಡಿ ” ಸ್ಟಿಕ್ಕರ್ ಗಳನ್ನು ಅಂಟಿಸುವ ಪ್ರತಿಭಟನೆಗೆ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ” ಎಂದು ತಿಳಿಸಿದರು.
Leave A Reply