ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
Posted On May 2, 2025

ಕರ್ನಾಟಕ ಪರೀಕ್ಷಾ ಮಂಡಳಿ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಕಳೆದ ಮಾರ್ಚ್ – ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆದ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದೂ ಒಟ್ಟು ಪರೀಕ್ಷೆ ಬರೆದ ಮಕ್ಕಳಲ್ಲಿ 91.12 ಶೇಕಡಾ ಉತ್ತೀರ್ಣರಾಗಿದ್ದಾರೆ. ಉಡುಪಿ ಎರಡನೇ ಸ್ಥಾನದಲ್ಲಿದ್ದು 89.96 ಶೇಕಡಾ ಮಕ್ಕಳು ಪಾಸಾಗಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು 83.19 ಶೇಕಡಾ ಮಕ್ಕಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಕರಾವಳಿಯ ಮೂರು ಜಿಲ್ಲೆಗಳು ಮೊದಲ ಮೂರು ಸ್ಥಾನಗಳನ್ನು ಹಂಚಿಕೊಂಡಿದ್ದು ಉತ್ತಮ ಸಾಧನೆ ಮಾಡಿವೆ.
ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 7 ಲಕ್ಷ 90 ಸಾವಿರದ 890. ಅದರಲ್ಲಿ ಐದು ಲಕ್ಷ 23 ಸಾವಿರದ 075 ಮಕ್ಕಳು ಪಾಸ್ ಆಗಿದ್ದಾರೆ.
- Advertisement -
Leave A Reply