• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!

Tulunadu News Posted On May 22, 2025
0


0
Shares
  • Share On Facebook
  • Tweet It

ತಮಿಳಿನ ಖ್ಯಾತ ನಾಯಕ ನಟ ಜಯಂ ರವಿ ಎಂದೇ ಪ್ರಖ್ಯಾತರಾಗಿರುವ ರವಿ ಮೋಹನ್ ಹಾಗೂ ಅವರ ಪತ್ನಿ ಆರತಿ ಅವರ ವಿಚ್ಚೇದನ ಪ್ರಕರಣ ಈಗ ನ್ಯಾಯಾಲಯದ ಮೆಟ್ಟಲೇರಿದೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿರುವ ದಂಪತಿಯ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದೆ. ವಿಚ್ಚೇದನವಾದ ಬಳಿಕ ಕೌಟುಂಬಿಕ ನಿರ್ವಹಣೆಗಾಗಿ ತನಗೆ ಪ್ರತಿ ತಿಂಗಳು 40 ಲಕ್ಷ ರೂಪಾಯಿ ಪರಿಹಾರ ದೊರಕಿಸಿಕೊಡುವಂತೆ ಅವರು ಆರತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ನ್ಯಾಯಾಲಯ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿ ಹೊಂದಾಣಿಕೆ ಬರುವ ವಿಷಯದಲ್ಲಿ ಪ್ರಸ್ತಾಪಿಸಿತಾದರೂ ಜಯಂ ರವಿ ಸ್ಪಷ್ಟ ಮನವಿಯ ಮೂಲಕ ಆರತಿ ಜೊತೆಗೆ ಯಾವುದೇ ಹೊಂದಾಣಿಕೆ ಸಾಧ್ಯವಿಲ್ಲವೆಂದು ತಿಳಿಸಿರುವುದಾಗಿ ವರದಿ ಆಗಿದೆ. ರವಿಯವರ ಪರ ವಕೀಲರು ವಿಚ್ಚೇದನ ಕರುಣಿಸುವಂತೆ ಮನವಿ ಮಾಡಿದರು. ಇದರ ಬೆನ್ನಲ್ಲೇ ಆರತಿ ಜೀವನಾಂಶದ ಮೊತ್ತ ಕೇಳಿ ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 12 ಕ್ಕೆ ಮುಂದೂಡಿದೆ.
ಜಯಂ ರವಿ ಕಳೆದ ವರ್ಷವೇ ತಾವು ವಿಚ್ಚೇದನ ಪಡೆಯುವುದಾಗಿ ಬಹಿರಂಗವಾಗಿ ಘೋಷಿಸಿದ್ದರು.

ಆದರೆ ಈ ಬಗ್ಗೆ ಬಹಿರಂಗವಾಗಿ ಮಾತನಾಡುವ ಮೊದಲು ಈ ಬಗ್ಗೆ ತಮ್ಮ ಬಳಿ ಯಾವುದೇ ಸಮಾಲೋಚನೆ ಮಾಡಿಲ್ಲ ಎಂದು ಆರತಿ ಅಸಮಾಧಾನ ವ್ಯಕ್ತಪಡಿಸಿದ್ದರು. ಕಾಲಿವುಡ್ ಪ್ರಕಾರ ಗಾಯಕಿ ಕೆನಿಶಾ ಜೊತೆಗಿನ ಜಯಂ ರವಿಯವರ ಆಪ್ತತೆಯಿಂದಾಗಿ ಅವರ ಸಂಸಾರದಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಲಾಗಿದೆ. ಇಬ್ಬರೂ ಇತ್ತೀಚೆಗೆ ಹಲವಾರು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಆರತಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದು, 18 ವರ್ಷಗಳ ದಾಂಪತ್ಯ ಜೀವನವನ್ನು ಪತಿ ಕಡೆಗಣಿಸಿದ್ದು, ಸಾಂಸಾರಿಕ ಜವಾಬ್ದಾರಿಗಳಿಂದ ನುಣುಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ತಾನೀಗ ಮಕ್ಕಳ ಭವಿಷ್ಯಕ್ಕಾಗಿ ಹೋರಾಡಬೇಕಿದೆ ಎನ್ನುವ ಆರತಿ ಹೇಳಿಕೆಗೆ ತನ್ನ ಮೇಲೆ ಮಾನಸಿಕ ಮತ್ತು ಆರ್ಥಿಕ ನಿಯಂತ್ರಣ ತರಲು ಆರತಿ ನಿರಂತರ ಪ್ರಯತ್ನಿಸಿರುವುದಾಗಿ ಅದರಿಂದ ಬೇಸತ್ತಿದ್ದೇನೆ ಎಂದು ರವಿ ಹೇಳಿದ್ದಾರೆ. ಇಬ್ಬರೂ 2009 ರಲ್ಲಿ ಮದುವೆಯಾಗಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರತಿ ಮೂರನೇ ವ್ಯಕ್ತಿಯಿಂದಾಗಿ ಈ ಪರಿಸ್ಥಿತಿಯನ್ನು ತಾವು ಅನುಭವಿಸುತ್ತಿರುವುದಾಗಿ ಅದಕ್ಕೆ ತಮ್ಮ ಬಳಿ ಸಾಕ್ಷ್ಯ ಇರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ತಾವು ಹೆಚ್ಚಿಗೆ ಏನೂ ಹೇಳಲು ಇಚ್ಚಿಸುವುದಿಲ್ಲ ಎಂದು ಹೇಳಿರುವ ಆರತಿ, ತಮಗೆ ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯ ಕಮೆಂಟ್ ಗಳನ್ನು ಮಾಡುತ್ತಿದ್ದು, ಕೆಲವರು ಪ್ರತಿ ತಿಂಗಳು 40 ಲಕ್ಷ ರೂಪಾಯಿ ಕೇಳಿರುವ ಬಗ್ಗೆ ಟೀಕೆ ಮಾಡಿದ್ದಾರೆ. ಇನ್ನು ಕೆಲವರು ಸಮಂತಾ ತರಹ ಒಂದೂ ರೂಪಾಯಿ ಕೂಡ ಕೇಳದ ಹೆಣ್ಣಿನ ತರಹ ಇರಬೇಕು ಎಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು ಮಹಿಳೆಯರು ಪ್ರಬಲರಾಗಿರಬೇಕು, ಹೀಗೆ ಹಣಕ್ಕಾಗಿ ಒತ್ತಾಯಿಸಬಾರದು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search