• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ

Tulunadu News Posted On May 24, 2025
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದ ವಿಧಾನಸಭೆಗೆ ಇಂದು ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿರಲಿದೆ ಎಂದು ಹೈದ್ರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಸುಮಾರು 1 ತಿಂಗಳ ಕಾಲ ನಡೆಸಿದ ಈ ಸಮೀಕ್ಷೆಯಲ್ಲಿ 10,481 ಜನರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಚುನಾವಣೆ ನಡೆದರೆ 136 ರಿಂದ 159 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ 62 ರಿಂದ 82 ಸೀಟುಗಳನ್ನು ಪಡೆಯಲಿದೆ. 2023 ರ ಚುನಾವಣೆಯಲ್ಲಿ ಶೇ 42.88 ರಷ್ಟು ಮತಗಳನ್ನು ಪಡೆದಿದ್ದ ಕಾಂಗ್ರೆಸ್, ಈಗ ಚುನಾವಣೆ ನಡೆದರೆ ಮತಗಳಿಗೆ ಪ್ರಮಾಣ ಶೇ 40.3ಕ್ಕೆ ಕುಸಿಯಲಿದೆ. ಸದ್ಯ ಕಾಂಗ್ರೆಸ್ ಆಡಳಿತ ವಿರೋಧ ಅಲೆ ಎದುರಿಸುತ್ತಿದೆ ಎಂದು ಸಮೀಕ್ಷೆ ಹೇಳಿರುವುದಾಗಿ ವರದಿಯಾಗಿದೆ.
ಜೆಡಿಎಸ್ ಕೇವಲ 3 ರಿಂದ 6 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಗಳಿದ್ದು, ಅದರ ಮತಗಳಿಕೆ ಪ್ರಮಾಣ ಶೇ 5 ಕ್ಕೆ ಕುಸಿಯಲಿದೆ. 2023 ರಲ್ಲಿ ಜೆಡಿಎಸ್ ಶೇ 18.3 ರಷ್ಟು ಮತಗಳನ್ನು ಪಡೆದಿತ್ತು. ಆ ಮೂಲಕ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯ ರಾಜಕಾರಣದಲ್ಲಿ ಕಳೆದ 20 ವರ್ಷಗಳಲ್ಲಿ (2004, 2008, 2018) ರಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರದ ಗದ್ದುಗೆ ಏರಲು ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ.

ಸಿದ್ಧರಾಮಯ್ಯ ಅತ್ಯಂತ ಜನಪ್ರಿಯ ಸಿಎಂ
ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಈಗಲೂ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಶೇ 29.2 ರಷ್ಟು ಮತದಾರರು ಸಿದ್ಧರಾಮಯ್ಯ ಅವರಿಗಾಗಿ ಮತ ಹಾಕಲಿದ್ದಾರೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಮತ ಹಾಕುವವರ ಸಂಖ್ಯೆ ಶೇ 10.7 ರಷ್ಟು. ಬಿ.ಎಸ್.ಯಡಿಯೂರಪ್ಪ ಅವರಿಗಾಗಿ ಮತ ಹಾಕುವವರ ಸಂಖ್ಯೆ ಶೇ 5.5, ಬಸವರಾಜ ಬೊಮ್ಮಾಯಿಗೆ ಶೇ 3.6, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ಶೇ 5.2 ರಷ್ಟು ಮತಗಳು ಆಯಾ ಪಕ್ಷಗಳಿಗೆ ಸಿಗುವ ಸಾಧ್ಯತೆಗಳಿವೆ.

ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ

ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ನೀಡುವ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮಿ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ 45.5 ರಷ್ಟು ಜನರು ಹೇಳಿದ್ದಾರೆ. ನಂತರದ ಸ್ಥಾನದಲ್ಲಿ ಶಕ್ತಿ (19%), ಅನ್ನಭಾಗ್ಯ (17%), ಗೃಹಜ್ಯೋತಿ (13.5%), ಯುವನಿಧಿ (2%) ಸ್ಥಾನ ಪಡೆದಿದೆ. ಶೇ 3 ರಷ್ಟು ಜನರಿಗೆ ಗ್ಯಾರಂಟಿಗಳ ಮಾಹಿತಿ ಇಲ್ಲ ಎಂದು ವರದಿ ಹೇಳಿದೆ.

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search