• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!

Tulunadu News Posted On May 27, 2025
0


0
Shares
  • Share On Facebook
  • Tweet It

ಕಳೆದ ಎರಡು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಗೆ ಬಿಸಿತುಪ್ಪವಾಗಿದ್ದ ಶಾಸಕರುಗಳಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅವರು ಇನ್ನು ಆರು ವರ್ಷ ಬಿಜೆಪಿಯಿಂದ ಸ್ಪರ್ಧಿಸುವಂತಿಲ್ಲ.
ಇದು ಸೋಮಶೇಖರ್ ಹಾಗೂ ಹೆಬ್ಬಾರ್ ಅವರಿಗೆ ಶಾಕ್ ಎಂದು ಹೇಳುವಂತಿಲ್ಲ. ಇದು ಅವರ ನಿರೀಕ್ಷೆಯಂತೆಯೇ ನಡೆದಿದೆ. ತಾವು ಬಿಜೆಪಿಗೆ ರಾಜೀನಾಮೆ ನೀಡಿದರೆ ಮತ್ತೇ ಚುನಾವಣೆ ಎದುರಿಸಬೇಕಾಗುತ್ತದೆ. ಅದೇ ಪಕ್ಷವೇ ಉಚ್ಚಾಟನೆ ಮಾಡಿದರೆ ಶಾಸಕ ಸ್ಥಾನ ಅಭಾದಿತ.
ಸದ್ಯ ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ಸನ್ನು ಅಧಿಕೃತವಾಗಿ ಸೇರುತ್ತಾರಾ ಅಥವಾ ತಟಸ್ಥರಾಗಿ ನಿಲ್ಲುತ್ತಾರಾ ಎಂದು ಕಾದು ನೋಡಬೇಕು.
ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಇಲ್ಲಿಯ ತನಕ ಬಿಜೆಪಿ ವಿಧಾನಸಭೆಯ ಒಳಗೆ ಅಥವಾ ಹೊರಗೆ ತೆಗೆದುಕೊಳ್ಳುತ್ತಿದ್ದ ಯಾವುದೇ ನಿರ್ಧಾರಗಳಿಗೂ ಇವರಿಬ್ಬರೂ ಬೆಂಬಲ ಕೊಡುತ್ತಿರಲಿಲ್ಲ. ಇನ್ನು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಪರ ಸೋಮಶೇಖರ್ ಹೆಚ್ಚಾಗಿ ಬ್ಯಾಟಿಂಗ್ ಮಾಡುತ್ತಿದ್ದರು.
ಇವರಿಬ್ಬರಿಗೆ ಶೋಕಾಸ್ ನೋಟಿಸ್ ಕೊಟ್ಟರೂ ಇವರಿಬ್ಬರು ತಮ್ಮ ನಿಲುವನ್ನು ಬದಲಿಸದೇ ಕಾಂಗ್ರೆಸ್ ಪಕ್ಷದತ್ತ ಹೆಚ್ಚು ವಾಲುತ್ತಿದ್ದರು. ಒಟ್ಟಿನಲ್ಲಿ ತಮ್ಮ ಮಾತೃಪಕ್ಷಕ್ಕೆ ಹೆಚ್ಚು ಒಲವನ್ನು ತೋರಿಸುತ್ತಿದ್ದ ಈ ಶಾಸಕರಿಗೆ ಬಿಜೆಪಿ ಗೇಟ್ ಪಾಸ್ ನೀಡಿ ತನ್ನ ಅಸಮಾಧಾನ ತೋರಿಸಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search