ಗೌರಿ ಲಂಕೇಶ್ ಹಂತಕರನ್ನು ಶೀಘ್ರವೇ ಬಂಧಿಸಿ- ಆರ್ ಎಸ್ ಎಸ್ ಆಗ್ರಹ
ಎಡಪಂಥಿಯ ವಿಚಾರಧಾರೆಯ ಸಾಹಿತಿ, ಗೌರಿ ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ಅವರ ನಿವಾಸದ ಹೊರಗೆ ಮಂಗಳವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದವರನ್ನು ಶೀಘ್ರವೇ ಬಂಧಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಅದರೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಈ ಪ್ರಕರಣದಲ್ಲಿ ರಾಜ್ಯ ಸರಕಾರ ಮತ್ತು ಪೊಲೀಸರು ವಿಶೇಷ ಆಸಕ್ತಿ ವಹಿಸಿ ಕೊಲೆಗಡುಕರನ್ನು ಬಂಧಿಸಿ ಶಿಕ್ಷೆ ವಿಧಿಸುವ ತನಕ ಪ್ರಕರಣವನ್ನು ತೆಗೆದುಕೊಂಡು ಹೋಗಬೇಕೆಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ರಾಮಲಿಂಗರೆಡ್ಡಿ ತಪ್ಪಿತಸ್ಥರನ್ನು ತಕ್ಷಣ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ಸಹಿತ ರಾಷ್ಟ್ರ ರಾಜಧಾನಿಯಲ್ಲಿ ಒಬ್ಬ ಎಡಪಂಥಿಯ ಪತ್ರಕರ್ಥೆಯ ಹತ್ಯೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಬಿಜೆಪಿಯ ಬಹುನಿರೀಕ್ಷಿತ ಮಂಗಳೂರು ಚಲೋ ಮತ್ತು ಡಿವೈಎಸ್ ಪಿ ಗಣಪತಿ ಹತ್ಯಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಸುಪ್ರಿಂಕೋರ್ಟ್ ಸೂಚಿಸಿರುವುದು ಮಾಧ್ಯಮಗಳಲ್ಲಿ ತಮ್ಮ ಜಾಗವನ್ನು ಕಳೆದುಕೊಂಡಿವೆ.
Leave A Reply