• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!

TULUNADU NEWS Posted On June 16, 2025
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಶನಿ ಶಿಂಗನಾಪುರ ದೇಶದ ಅತೀ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದು. ಇಲ್ಲಿ ನಿತ್ಯ ಅಸಂಖ್ಯಾತ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಇದರ ಆಡಳಿತ ನೋಡಿಕೊಳ್ಳುತ್ತಿರುವ ಟ್ರಸ್ಟ್ ನ ಅಧೀನ ಸುಮಾರು 2000 ಕ್ಕಿಂತಲೂ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಲಾಗುತ್ತದೆ. ಇಲ್ಲಿ ಇತ್ತೀಚೆಗೆ 167 ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆ 167 ರಲ್ಲಿ 114 ಮಂದಿ ಮುಸ್ಲಿಮರು ಎನ್ನುವುದೇ ಈಗ ಇರುವ ವಿಷಯ. ಹಾಗಾದ್ರೆ ಹಿಂದೂ ದೇವಾಲಯಗಳಲ್ಲಿ ಮುಸ್ಲಿಮರು ಕೆಲಸ ಮಾಡುತ್ತಿರುವುದು ಸರಿಯಾ ಎನ್ನುವ ಪ್ರಶ್ನೆ ಬರುತ್ತದೆ. ಇಲ್ಲಿ ಮುಸ್ಲಿಮ್ ಸಿಬ್ಬಂದಿಗಳನ್ನು ಕೆಲಸಕ್ಕೆ ನಿಯೋಜನೆಗೊಳಿಸಲಾಗಿತ್ತು. ಆದರೆ ಈಗ ಅದರಲ್ಲಿ 114 ಮಂದಿಯನ್ನು ವಜಾಮಾಡಲಾಗಿದೆ. ಇಷ್ಟು ದಿನ ಕೆಲಸಕ್ಕೆ ಇದ್ದವರನ್ನು ಈಗ ವಜಾ ಮಾಡಲು ಕಾರಣವೇನು ಎನ್ನುವ ಪ್ರಶ್ನೆ ಉದ್ಭವಿಸಿತ್ತು.

ಶನಿ ಶಿಂಗಾಪುರ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ಟ್ರಸ್ಟ್ ಪ್ರಕಾರ ವಜಾ ಮಾಡಿರುವ ಸಿಬ್ಬಂದಿಗಳನ್ನು ಶಿಸ್ತು ಉಲ್ಲಂಘನೆ ಮಾಡಿರುವ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಲಾಗಿದೆ. ಅವರು ಕೆಲಸಕ್ಕೆ ನಿರಂತರವಾಗಿ ಗೈರಾಗಿದ್ದರು ಮತ್ತು ಉದ್ಯೋಗದಲ್ಲಿ ಸರಿಯಾಗಿ ಶಿಸ್ತಿನಿಂದ ಸೇವೆಯಲ್ಲಿ ನಿರತರಾಗಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ಆದರೆ ಸಕಾಲ್ ಹಿಂದೂ ಸಮಾಜ್ ಎನ್ನುವ ಹಿಂದೂ ಪರ ಸಂಘಟನೆಯವರು ಶನಿ ಶಿಂಗಾಪುರ ಕ್ಷೇತ್ರದ ಸನ್ನಿಧಿಯಲ್ಲಿ ಮೂರ್ತಿ ಆರಾಧನೆಯನ್ನು ಒಪ್ಪದ, ಹಿಂದೂ ದೇವರ ಬಗ್ಗೆ ಭಕ್ತಿ ಇಲ್ಲದವರನ್ನು ಅಲ್ಲಿ ಕೆಲಸಕ್ಕೆ ನೇಮಿಸಿದ ಕುರಿತು ತಗಾದೆ ತೆಗೆದಿದ್ದು, ಅಂತಹ ಎಲ್ಲರನ್ನು ಕೂಡಲೇ ಕೆಲಸದಿಂದ ತೆಗೆದುಹಾಕುವಂತೆ ಟ್ರಸ್ಟ್ ಮೇಲೆ ಒತ್ತಡ ಹಾಕಿದೆ. ಅದರೊಂದಿಗೆ ಒಂದು ವಿಡಿಯೋವನ್ನು ಕೂಡ ಈ ಸಂಘಟನೆಯವರು ಬಿಡುಗಡೆ ಮಾಡಿದ್ದು, ಅದರಲ್ಲಿ ಹಿಂದೂಯೇತರರೊಬ್ಬರು ದೇವಳದಲ್ಲಿ ಪೇಟಿಂಗ್ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಆದರೆ ಮುಸ್ಲಿಮರನ್ನು ತೆಗೆದು ಹಾಕಿರುವ ಕ್ರಮವನ್ನು ಸಮರ್ಥಿಸಿರುವ ದೇವಳದ ಸಿಇಒ ಅವರು ಯಾವುದೇ ಪೂರ್ವಾಗ್ರಹ ಇಲ್ಲದೇ, ಕೇವಲ ಕೆಲಸ ಸರಿಯಾಗಿ ಮಾಡುತ್ತಿರಲಿಲ್ಲ ಎನ್ನುವ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ. “ಇಲ್ಲಿ ನಾವು ಯಾವುದೇ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವಾಗ ಧರ್ಮಾಧಾರಿತವಾಗಿ ನೋಡದೇ, ಕೇವಲ ಅವರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಏಕೈಕ ಕಾರಣಕ್ಕಾಗಿ ಕೆಲಸದಿಂದ ತೆಗೆದುಹಾಕುವುದಾಗಿ” ತಿಳಿಸಿದ್ದಾರೆ. ಇಲ್ಲಿ ಅನೇಕರು ಹಲವು ಕಾಲದಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. ಅಂತವರ ಸಂಬಳವನ್ನು ಹಿಡಿದಿಟ್ಟುಕೊಂಡು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಹೀಗೆ ಉಚ್ಚಾಟನಾ ಕ್ರಮ ತೆಗೆದುಕೊಂಡಿರುವ ಮೊದಲ ಬ್ಯಾಚ್ ಇದು” ಎಂದು ಹೇಳಲಾಗಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
TULUNADU NEWS January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
TULUNADU NEWS January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search