• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!

TULUNADU NEWS Posted On June 17, 2025
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಹಿಂದೂಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಂದೆಡೆ ಮುಸ್ಲಿಮರ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ, ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಹಿಂದೂಗಳನ್ನು ಸುರಕ್ಷಿತವಾಗಿರಿಸಲು ಜನಸಂಖ್ಯೆಯನ್ನು ಹೆಚ್ಚಿಸಬೇಕು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ಯೋಜನಾಬದ್ಧವಾಗಿ ನಿರ್ಮಿಸಿದಮತೆ, ಹಿಂದೂಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಪುನರುಚ್ಚರಿಸಿದರು. ಪ್ರತಿ ಶನಿವಾರ ಹನುಮಾನ್ ಚಾಲೀಸಾ ಪಠಣೆಯ ಮೂಲಕ ಹಿಂದೂಗಳನ್ನು ಒಗ್ಗೂಡಿಸುವ ಕರೆ ನೀಡಿದ ಅವರು, ಹಿಂದೂಗಳಾಗಿ, ಹಿಂದೂಗಳ ಜೊತೆ ಮಾತ್ರ ವ್ಯಾಪಾರ ಮಾಡಿ, ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಿ ಎಂದು ಸಲಹೆ ನೀಡಿದರು.

ಹಿಂದೂ ಧರ್ಮದಲ್ಲಿ ಆರೋಗ್ಯ, ವಿಜ್ಞಾನ ಮತ್ತು ಧ್ಯೇಯ ನಿರ್ವಹಣೆಯ ಅಂಶಗಳಿರುವುದಾಗಿ ಉಲ್ಲೇಖಿಸಿ ಅವರು, ನಿತ್ಯ ಬೆಳಿಗ್ಗೆ ಹಿಂದೂ ದೇವರ ಸ್ಮರಣೆ ಮಾಡಿ, ಪೋಷಕರ ಚರಣಗಳಿಗೆ ನಮಸ್ಕರಿಸಿ ಎಂದು ತಿಳಿಸಿದರು.

ಹಿಂದೂ ಧರ್ಮ 2000 ವರ್ಷಗಳ ಹಿಂದೆ ಭಾರತದಲ್ಲಿ ಸಂಪೂರ್ಣವಾಗಿ ಹಿಂದೂಗಳೇ ಇದ್ದರು. ಈಗ ಆ ಸಂಖ್ಯೆ ಕುಸಿದಿದೆ. ಸುರಕ್ಷಿತ ಮತ್ತು ಸಮೃದ್ಧ ಹಿಂದೂವಾಗಿ ಧರ್ಮವನ್ನು ಬೆಳೆಸಬೇಕು ಎಂದು ಅವರು ಕರೆ ನೀಡಿದರು. ತೊಗಾಡಿಯಾ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ- ವಿರೋಧ ಅಭಿಪ್ರಾಯಗಳ ಮಹಾಪೂರವೇ ಹರಿದುಬರುತ್ತಿದೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
TULUNADU NEWS May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
TULUNADU NEWS May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search