• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!

TULUNADU NEWS Posted On June 18, 2025
0


0
Shares
  • Share On Facebook
  • Tweet It

ಮಂಗಳೂರು ಜೂನ್ 18: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ.

ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ.

ತಡರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಎದುರಲ್ಲೇ ಅಪಘಾತ ನಡೆದಿದೆ. ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಅತಿ ವೇಗದಿಂದ ಧಾವಿಸುತ್ತಿತ್ತು. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಕಾರು ಸಂಪೂರ್ಣ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಚಿಂದಿಯಾಗಿದೆ.

ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
TULUNADU NEWS May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
TULUNADU NEWS May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search