• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ – ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!

TULUNADU NEWS Posted On June 24, 2025
0


0
Shares
  • Share On Facebook
  • Tweet It

ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬುತ್ತಿದ್ದಂತೆ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಶಾಸಕರು ಒಂದೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಲ್ಲಿದ್ದಾರೆ. ಈಗ ಇದಕ್ಕೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕಾಂಗ್ರೆಸ್ ಶಾಸಕ ಎನ್. ವೈ, ಗೋಪಾಲಕೃಷ್ಣ ಹೊಸ ಸೇರ್ಪಡೆ. ತಮ್ಮ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದಿರುವ ಬಗ್ಗೆ ತಮ್ಮ ಬೇಸರವನ್ನು ಬಹಿರಂಗ ವೇದಿಕೆಯಲ್ಲಿ ಅವರು ಹೊರಹಾಕಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರದ ಕಣಕುಪ್ಪೆಯಲ್ಲಿ ನೂತನ ಟೂಲ್ಸ್ ಫ್ಯಾಬ್ರಿಕ್ ಕಂಪೆನಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
“ನಾನು ಶಾಸಕನಾಗಿದ್ದುಕೊಂಡೇ ನಮ್ಮ ಗ್ರಾಮಗಳಲ್ಲಿ ಒಂದು ಚರಂಡಿ ಅಥವಾ ಒಂದು ರಸ್ತೆ ಮಾಡಲು ಆಗಲ್ಲ. ಕಣ್ಣಿಗೆ ಕಾಣುವಂತಹ ಶಾಲೆಯನ್ನು ಕಟ್ಟುವುದಕ್ಕೆ ಆಗ್ತಿಲ್ಲ” ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ, ಕಾಂಗ್ರೆಸ್ ಮುಖಂಡ ಎನ್. ವೈ ಗೋಪಾಲಕೃಷ್ಣ ನೋವು ತೋಡಿಕೊಂಡಿದ್ದಾರೆ.


ಭಾಷಣವನ್ನು ಆರಂಭಿಸಿದ ತಕ್ಷಣ ಅವರು ಹೇಳಿದ ಮೊದಲ ಮಾತುಗಳು ಕರ್ನಾಟಕದ ಪ್ರಸ್ತುತ ಪರಿಸ್ಥಿತಿಯನ್ನು ಹೇಳಿದಂತೆ ಇತ್ತು. ” ಶಾಸಕನಾದ ನನಗೆ ನನ್ನ ಕ್ಷೇತ್ರದ ಹಳ್ಳಿಗಳಲ್ಲಿ ಚರಂಡಿ ಅಥವಾ ರಸ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಈ ಖಾಸಗಿ ಕಂಪೆನಿಯವರು ಇಲ್ಲಿಗೆ ಬಂದು ಇಷ್ಟು ದೊಡ್ಡ ಫ್ಯಾಕ್ಟರಿ ಕಟ್ಟಿ ನಡೆಸುತ್ತಾರೆ ಎಂದರೆ ಅದು ನಮ್ಮ ಪುಣ್ಯ ಎಂದು ಹೇಳಿದರು. ಇವರು ಹೀಗೆ ಇಲ್ಲಿ ಬಂದು ವ್ಯವಹಾರ ಮಾಡುವುದರಿಂದ ಗ್ರಾಮದ 200 ರಿಂದ 300 ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸಿಕ್ಕಿದಂತೆ ಆಗುತ್ತದೆ. ಆದರೆ ನಾವು ಶಾಸಕರಾಗಿದ್ದುಕೊಂಡು ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಎನ್. ವೈ ಗೋಪಾಲಕೃಷ್ಣ ಹೇಳಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಹೀಗೆ ಅಸಮಾಧಾನ ಹೊರಹಾಕುತ್ತಿರುವ ಶಾಸಕರಲ್ಲಿ ಇವರು ಮೊದಲನೇಯವರಲ್ಲ. ಹಿರಿಯ ಶಾಸಕ ಬಿ.ಆರ್.ಪಾಟೀಲ ಬಳಿಕ ಕಾಗವಾಡ ಶಾಸಕ ರಾಜು ಕಾಗೆ ಅವರು ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರು ಸಮುದಾಯ ಭವನ ಕಾಮಗಾರಿಗೆ ಸಂಬಂಧಿಸಿದಂತೆ 13 ಕೋಟಿ ರೂಪಾಯಿ ವರ್ಕ್ ಆರ್ಡರ್ ಬಿಡುಗಡೆ ಮಾಡದೇ ಸತಾಯಿಸುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ತಾವು ವಸತಿ ಹಗರಣದ ಬಗ್ಗೆ ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ. ನಾನು ಸತ್ಯವನ್ನೇ ಹೇಳಿದ್ದೀನಿ. ನನ್ನ ಹೇಳಿಕೆಗೆ ಈಗಲೂ ಬದ್ಧ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ. ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. “ವಸತಿಗಾಗಿ ಹಣ” ಕುರಿತ ತಮ್ಮ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಪಾಟೀಲ್ ಅವರು “ನನ್ನ ಹೇಳಿಕೆ ಸರಿಯಾಗಿದೆ ಎಂದು ರಾಜು ಕಾಗೆ ಕೂಡ ಹೇಳಿದ್ದಾರೆ. ಇನ್ನು ಹಲವರು ಇದರ ಬಗ್ಗೆ ಮಾತನಾಡುವವರಿದ್ದಾರೆ” ಎಂದರು. ಆ ಮೂಲಕ ಕಾಂಗ್ರೆಸ್ಸಿನಲ್ಲಿ ಇನ್ನು ಹಲವು ಅಸಮಾಧಾನಿತ ಶಾಸಕರು ಇದ್ದಾರೆ ಎನ್ನುವ ಹಿಂಟ್ ನೀಡಿದ್ದಾರೆ. ಇನ್ನು ಬಿ. ಆರ್, ಪಾಟೀಲ್ ಅವರಿಗೆ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಬಲ ಸೂಚಿಸಿದ್ದಾರೆ. ವಸತಿ ಸಚಿವ ಜಮೀರ್ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ಸಿನಲ್ಲಿ ಹತಾಶೆ, ಆಕ್ರೋಶದ ಬೇಗುದಿ ಬೇಯುತ್ತಿದೆ. ಯಾವಾಗ ಸ್ಫೋಟವಾಗುತ್ತಿದೆ ಎಂದು ಭಿಜೆಪಿ ಮುಖಂಡರು ಕಾಯುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
TULUNADU NEWS November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
TULUNADU NEWS November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search