• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಂವಿಧಾನದಿಂದ “ಜಾತ್ಯಾತೀತತೆ” ಮತ್ತು “ಸಮಾಜವಾದ” ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ – ಆರ್ ಎಸ್ ಎಸ್

TULUNADU NEWS Posted On June 27, 2025
0


0
Shares
  • Share On Facebook
  • Tweet It

ಭಾರತದಲ್ಲಿ ಆಗಿನ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಭಾರತದ ಸಂವಿಧಾನದಲ್ಲಿ ಜಾತ್ಯಾತೀತತೆ ಹಾಗೂ ಸಮಾಜವಾದ ಶಬ್ದಗಳ ಅಗತ್ಯತೆಯ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತೆ ಧ್ವನಿ ಎತ್ತಿದೆ. ಈ ಬಗ್ಗೆ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮಾತನಾಡುತ್ತಾ ” ಜಾತ್ಯಾತೀತತೆ ಹಾಗೂ ಸಮಾಜವಾದ ಶಬ್ದಗಳನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದಲ್ಲಿ ತಿದ್ದುಪಡಿ ಮಾಡಿ ಅಳವಡಿಸಲಾಗಿತ್ತು. ತುರ್ತು ಪರಿಸ್ಥಿತಿ ಹಿಂಪಡೆದ ನಂತರವೂ ಅದನ್ನು ಸಂವಿಧಾನದಿಂದ ತೆಗೆಯುವ ಪ್ರಯತ್ನ ಆಗಿಲ್ಲ. ಆದ್ದರಿಂದ ಅದನ್ನು ಸಂವಿಧಾನದಿಂದ ತೆಗೆಯಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯಬೇಕಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಈ ಶಬ್ದಗಳು ಇರಲೇ ಇಲ್ಲ” ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

“ಯಾರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದರೋ ಅವರು ಕೈಯಲ್ಲಿ ಸಂವಿಧಾನವನ್ನು ಹಿಡಿದುಕೊಂಡು ತಿರುಗಾಡುತ್ತಿದ್ದಾರೆ. ತುರ್ತು ಪರಿಸ್ಥಿತಿಯನ್ನು ಹೇರಿದ ಬಗ್ಗೆ ಅವರು ಕ್ಷಮೆ ಕೇಳಿಲ್ಲ. ಅವರು ದೇಶದ ಎದುರು ಆ ತಪ್ಪಿಗಾಗಿ ಕ್ಷಮೆ ಕೇಳಬೇಕಾಗಿತ್ತು. ಒಂದು ವೇಳೆ ನಿಮ್ಮ ಪೂರ್ವಜರು ತಪ್ಪು ಮಾಡಿದ್ದರೂ ನೀವು ಅವರ ಪರವಾಗಿ ಕ್ಷಮೆ ಕೇಳಬೇಕಿತ್ತು” ಎಂದು ಹೊಸಬಾಳೆ ಹೇಳಿದರು.

ಭಾರತದಲ್ಲಿ ಕಳೆದ ನಾಲ್ಕು ದಶಕಗಳಲ್ಲಿ ಈ “ಜಾತ್ಯಾತೀತತೆ” ಎನ್ನುವ ಶಬ್ದ ಅತೀ ಹೆಚ್ಚಾಗಿ ಚರ್ಚೆಗೆ ಬಂದಿದೆ. ಹೆಚ್ಚಾಗಿ ಬಲಪಂಥಿಯರು ಈ ಬಗ್ಗೆ ತಮ್ಮ ವಾದವನ್ನು ಮಂಡಿಸುತ್ತಾ, ಜಾತ್ಯಾತೀತತೆ ಎನ್ನುವ ವಿಷಯದಲ್ಲಿ ಕೆಲವರಿಗೆ ವೋಟ್ ಬ್ಯಾಂಕ್ ರಾಜಕೀಯ ಹಾಗೂ ಅಲ್ಪಸಂಖ್ಯಾತ ಓಲೈಕಿಕರಣಕ್ಕೆ ಮಾತ್ರ ಈ ಶಬ್ದ ಬಳಕೆಯಾಗುತ್ತಿದೆ ಬಿಟ್ಟರೆ ನಿಜವಾದ ಹುಸಿ ಜಾತ್ಯಾತೀತತೆಯೇ ಇಲ್ಲಿ ಚಾಲ್ತಿಯಲ್ಲಿದೆ ಎಂದು ಹೇಳುತ್ತಾ ಬಂದಿದ್ದಾರೆ.

ಆದರೆ ಸಂವಿಧಾನದ ಪೀಠಿಕೆಯಲ್ಲಿ ಜಾತ್ಯಾತೀತತೆ ಮತ್ತು ಸಮಾಜವಾದಿ ಶಬ್ದಗಳ ಅನಿವಾರ್ಯತೆ ಏನು ಎನ್ನುವ ಆರ್ ಎಸ್ ಎಸ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಅವರು “ಆರ್ ಎಸ್ ಎಸ್ ಯಾವತ್ತೂ ಸಂವಿಧಾನವನ್ನು ಒಪ್ಪಿರಲಿಲ್ಲ” ಎಂದು ಹೇಳಿದ್ದಾರೆ. ಈಗ ಸಂವಿಧಾನವನ್ನೇ ನಾಶ ಮಾಡಬೇಕೆನ್ನುವ ಅವರ ತಂತ್ರದ ಭಾಗವಾಗಿ ಜಾತ್ಯಾತೀತತೆ ಹಾಗೂ ಸಮಾಜವಾದ ತೆಗೆಯುವ ಹುನ್ನಾರ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರ್ ಎಸ್ ಎಸ್ ಹಾಗೂ ಬಿಜೆಪಿ ಹೊಸ ಸಂವಿಧಾನದ ರಚನೆ ಬಗ್ಗೆನೆ ಆಸಕ್ತಿ ಹೊಂದಿವೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
TULUNADU NEWS June 16, 2026
Najlepsze bonusy i sloty w polskim kasynie online
TULUNADU NEWS May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search