• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

Tulunadu News Posted On July 26, 2025
0


0
Shares
  • Share On Facebook
  • Tweet It

ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ‌ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ‌ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಜಿಲ್ಲೆಯ ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಯೇ ನೇರ ಕಾರಣ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಸ್ಪೀಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಭೆ, ಹೇಳಿಕೆಗಳಿಗೆ ಸೀಮಿತವಾಗಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆ ನಿವಾರಿಸಲು ಸಂಪೂರ್ಣ ವಿಫಲರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಮೂಲಕ ಆಡಳಿತ ನಡೆಯಬೇಕು.ಆದರೆ ಜಿಲ್ಲೆಯಲ್ಲಿ ಅಧಿಕಾರಗಳು ಮಾಡಿದ್ದೇ ಕಾನೂನು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಕಟ್ಟಡ ನಿರ್ಮಾಣ ಸ್ಥಗಿತಗೊಂಡಿರುವುದು ಜಿಲ್ಲೆಯ ಅಭಿವೃದ್ದಿ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮರಳು ಮತ್ತು ಕೆಂಪುಕಲ್ಲು ಅಭಾವ ನಿವಾರಿಸಲು ಬಿಜೆಪಿ ಜಿಲ್ಲೆಯಾದ್ಯಂತ ಹೋರಾಟ ನಡೆಸಿದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ನಡೆಸುವುದು ಬಿಜೆಪಿಗೆ ಅನಿವಾರ್ಯವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಕಟ್ಟಡ ನಿರ್ಮಾಣ ಉದ್ಯಮವನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳ ಹಿತ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search