• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ

Tulunadu News Posted On August 21, 2025
0


0
Shares
  • Share On Facebook
  • Tweet It

ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿದಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ಸಾರ್ವಜನಿಕರು, ಹಿರಿಯ ನಾಗರಿಕರು, ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವನೆ ನೀಡಿದ್ದಾರೆ.

ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು, ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

ನಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು 50 ಡೆಸಿಬಲ್‌ಗೆ ಸೀಮಿತಗೊಳಿಸಬೇಕು ಎನ್ನುವ ಅದೇಶದಿಂದ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಸಂಘ ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಅ. 21ರಿಂದ ಅನ್ವಯವಾಗುವಂತೆ ಈ ಸಮಸ್ಯೆ ಇತ್ಯರ್ದಪಡಿಸುವವರೆಗೆ ನಾವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡದಿರಲು ನಿರ್ದರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿನ್ನೆ ಮಾತಾಡಿದ್ದ ಸಂಘದ ಅಧ್ಯಕ್ಷ ಧನರಾಜ್ ಶೆಟ್ಟಿ ಅವರು, ಒಂದು ವಾರದಿಂದ ಅಲ್ಲಲ್ಲಿ ಧ್ವನಿವರ್ಧಕಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಪೊಲೀಸರಲ್ಲೇ ಬೇಸ್ ಸ್ಪೀಕರ್ ಹಾಗೂ ಡಿಜಿ ಬಗ್ಗೆ ಗೊಂದಲಗಳಿವೆ, ಅಸ್ಪಷ್ಟತೆ ಇದೆ, ಇದರಿಂದಾಗಿ ಕಾರ್ಯಕ್ರಮ ಆಯೋಜಕರು, ಕಲಾವಿದರು ಹಾಗೂ ಸಂಘದ ಸದಸ್ಯರಿಗೆ ಸಮಸ್ಯೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search