• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್

Tulunadu News Posted On September 10, 2025
0


0
Shares
  • Share On Facebook
  • Tweet It

ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟಬೇಕೆಂಬ ಆಸೆ ಇದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಸಂಗಮೇಶ್ವರ್, ‘ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅಂದರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ಮನವಿ ಮಾಡಿಕೊಂಡರು. ಇದಾದ ನಂತರ ಈದ್ ಮೆರವಣಿಗೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ.

ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ. ನಿಮ್ಮ ಈ ಪ್ರೀತಿ ನೋಡುತ್ತಿದ್ದರೆ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಉಂಟಾಗುತ್ತಿದೆ’ ಎಂದು ಭದ್ರಾವತಿಯ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈದ್ ಮಿಲಾದ್ ಹಿನ್ನೆಲೆಯಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆಯನ್ನೂ ಏರ್ಪಡಿಸಲಾಗಿತ್ತು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಮೇಶ್ವರ್‌, ’ಮುಸ್ಲಿಂ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ. 20 ವರ್ಷಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ರದ್ದಾಗಿತ್ತು. ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅದನ್ನು ಮತ್ತೆ ಪ್ರಾರಂಭಿಸಿತು. ಅಂದಿನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಯುತ್ತಿದೆ. ನಿಮ್ಮೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search